2023-24ನೇ ಸಾಲಿನ ಪೂರಕ ಅಂದಾಜುಗಳ ಮಾಹಿತಿ ಇಲ್ಲಿದೆ…

ಪೂರಕ ಅಂದಾಜಿನಲ್ಲಿ ರಾಜ್ಯದ ಆರ್ಥಿಕ ಪ್ರಗತಿ ಮತ್ತು ಸಂಪನ್ಮೂಲ ಸೃಜನೆಗೆ ಒತ್ತು ನೀಡುವ ದೃಷ್ಟಿಯಿಂದ 915 ಕೋಟಿ ರೂ. ಗಳನ್ನು ಬಂಡವಾಳ ವೆಚ್ಚಕ್ಕೆ ಒದಗಿಸಲಾಗಿದೆ ಎಂದು 2023-24ನೇ ಸಾಲಿನ ಪೂರಕ ಅಂದಾಜುಗಳು (ಒಂದನೇ ಕಂತು) ಕುರಿತಂತೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದ್ದಾರೆ.

2023-24 ನೇ ಸಾಲಿನ ಆಯವ್ಯಯದಲ್ಲಿ ಒಟ್ಟು ಅಭಿಯಾಚನೆ ಮಾಡಿದ ಮೊತ್ತ 3,41,321 ಕೋಟಿ ರೂ. ಗಳಲ್ಲಿ ಪೂರಕ ಅಂದಾಜಿನ ಮೊದಲನೇ ಕಂತಿನಲ್ಲಿ ಒದಗಿಸಿದ ಒಟ್ಟು ಮೊತ್ತ 3,542 ಕೋಟಿ ರೂ.ಗಳಾಗಿದ್ದು, ಇದು ಒಟ್ಟು ಅಭಿಯಾಚನೆ ಮಾಡಿದ ಮೊತ್ತದ ಶೇ.1 ರಷ್ಟಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದರಲ್ಲಿ ರಾಜಸ್ವ ಖಾತೆಯಲ್ಲಿ 2677 ಕೋಟಿ ರೂ.ಗಳು ಮತ್ತು ಬಂಡವಾಳ ಖಾತೆಯಲ್ಲಿ 915 ಕೋಟಿ ರೂ.ಗಳಾಗಿದೆ. ಈ ಹೆಚ್ಚುವರಿ ಅನುದಾನದಲ್ಲಿ ಕೇಂದ್ರ ಸರ್ಕಾರದ ಸ್ವೀಕೃತಿಗಳಿಂದ 684 ಕೋಟಿ ರೂ. ಗಳು ಮತ್ತು ರಿಸರ್ವ್‌ ಫಂಡ್‌ ಠೇವಣಿಗಳಿಂದ 327 ಕೋಟಿ ರೂ. ಗಳನ್ನು ಭರಿಸಲಾಗುವುದು. ಆದ್ದರಿಂದ ನಿವ್ವಳ ಹೊರಹೋಗುವ ಮೊತ್ತವು 2531 ಕೋಟಿ ರೂ. ಗಳು ಮಾತ್ರವಾಗಿದೆ ಎಂದಿದ್ದಾರೆ.

ಈ ಮೊತ್ತವನ್ನು ಸ್ವಂತ ರಾಜಸ್ವ ಸ್ವೀಕೃತಿಗಳಿಂದ, ಕೇಂದ್ರ ಸರ್ಕಾರದಿಂದ ಸ್ವೀಕೃತವಾಗುವ ತೆರಿಗೆ ಪಾಲಿನ ಹೆಚ್ಚಳ, ಭಾರತ ಸರ್ಕಾರದ ವಿಶೇಷ ಬಂಡವಾಳ ಸಹಾಯ ಯೋಜನೆ ಮತ್ತು ಅಗತ್ಯವಿದ್ದಲ್ಲಿ ವೆಚ್ಚದ ಮರು ಪ್ರಾಧಾನ್ಯತೆ ಮತ್ತು ವೆಚ್ಚದಲ್ಲಿ ಸಂಭವನೀಯ ಉಳಿತಾಯದ ಮೂಲಕ ಭರಿಸಲಾಗುವುದು ಎಂದು ತಿಳಿಸಿದ್ದಾರೆ.

ಇದರಲ್ಲಿ ಮುಖ್ಯವಾಗಿ ಸಮಾಜ ಕಲ್ಯಾಣ ಇಲಾಖೆಗೆ ಎಸ್‍ಸಿಎಸ್‍ಪಿ / ಟಿಎಸ್‍ಪಿ ಹಣದಲ್ಲಿ 390 ಕೋಟಿ ರೂ. ಗಳು ಟಿಎಸ್ಪಿ ನಲ್ಲಿ 118 ಒಟ್ಟು ವಸತಿಶಾಲಾ ಕಟ್ಟಡ ನಿರ್ಮಾಣ-ನಿರ್ವಹಣೆಗೆ, ರೂ.508 ಕೋಟಿ ಸಮಾಜ ಕಲ್ಯಾಣಕ್ಕೆ ಕೊಡಲಾಗಿದೆ. ರಾಜ್ಯ ವಿಪತ್ತು ಪರಿಹಾರ ನಿಧಿ ರೂ.502 ಕೋಟಿ, ಸಮಗ್ರ ಶಿಶು ಆರೋಗ್ಯ ಯೋಜನೆಗೆ ರೂ.310 ಕೋಟಿ, ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ 297 ಕೋಟಿ ರೂ. , ಐಸಿಡಿಎಸ್ ಕೋಶಕ್ಕೆ ರೂ.284 ಕೋಟಿ, ಕರ್ನಾಟಕ ರಾಜ್ಯ ಉಗ್ರಾಣ ನಿಗಮಕ್ಕೆ ಸಾಲವಾಗಿ 229 ಕೊಟಿ ರೂ., ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳು  ಕ್ಷೇಮ ಕೇಂದ್ರವಾಗಿ ಪರಿವರ್ತನೆಗೆ ರೂ.180 ಕೋಟಿ, ನಬಾರ್ಡ್ ರಸ್ತೆ ಕಾಮಗಾರಿಗೆ 150 ಕೋಟಿ ರೂ., ಮಕ್ಕಳು ಹದಿಹರೆಯದವರ ಗ್ರಂಥಾಲಯ ಯೋಜನೆಗೆ 132 ಕೋಟಿ ರೂ., ಕೃಷಿ ಭಾಗ್ಯಕ್ಕೆ ರೂ.100 ಕೋಟಿ ಒದಗಿಸಲಾಗುತ್ತದೆ. ಕೇಂದ್ರ ಪುರಸ್ಕೃತ ಯೋಜನೆಯಡಿ ರೂ.74 ಕೋಟಿ ಕೇಂದ್ರ ಸರ್ಕಾರದಿಂದ ಬರಬೇಕಾಗಿದೆ ಎಂದರು.

ಬಜೆಟ್ ನಂತರ ಯಾವುದೇ ಬಾಬ್ತಿಗೆ ಅನುದಾನ ಕಡಿಮೆಯಾಗಿದ್ದರೆ, ಅದಕ್ಕೆ ಹೆಚ್ಚು ದುಡ್ಡು ಬೇಕಾದಲ್ಲಿ, ಹೊಸ ಖರ್ಚು ಬಂದರೆ, ಅದಕ್ಕೆ ತಾತ್ಕಾಲಿಕವಾಗಿ contingency fund ನಿಂದ ಬಿಡುಗಡೆಯಾಗುತ್ತದೆ. ಬಜೆಟ್ ನಿಗದಿಪಡಿಸಿರುವ ಮಧ್ಯೆ ಅನುದಾನ ಬೇಕಾದರೆ, ಅಂತಹ ಖರ್ಚು ಮಾಡಿರುವುದಕ್ಕೆ ಪೂರಕ ಬಜೆಟ್ ಮಂಡಿಸಲಾಗುತ್ತದೆ ಎಂದು ಹೇಳಿದ್ದಾರೆ.

2022-23 ರಲ್ಲಿ 13,573 ಕೋಟಿ ರೂ. notional ಉಳಿಕೆಯಾಗಿದೆ. ಈ ಮೊತ್ತವನ್ನು 3,27,747 ಕೋಟಿ ಈ ವರ್ಷದ ಖರ್ಚು ಇರುತ್ತದೆ, ಉಳಿಕೆ ಮೊತ್ತವನ್ನೂ ಸೇರಿಸಿ, 3,41,321 ಕೋಟಿ ರೂ. ಖರ್ಚಿಗೆ ಒಪ್ಪಿಗೆ ತೆಗೆದುಕೊಂಡಿರುತ್ತದೆ. ಯಾವುದೇ ಖರ್ಚು ಹಾಗೂ ಉಳಿಕೆಗಳಿಗೆ ಸದನದ ಒಪ್ಪಿಗೆ ಪಡೆಯಬೇಕಾಗುತ್ತದೆ. ಸದನವೆಂಬುದು ಸಾರ್ವಭೌಮ, ಇಲ್ಲಿ ಒಪ್ಪಿಗೆ ದೊರೆಯಬೇಕು.  notional expenditure ಕೂಡ ಬಜೆಟ್ ನಲ್ಲಿ ಸೇರಿ ರೂ.3,452.1 ಕೋಟಿ, outflow 2531 ಕೋಟಿ ರೂ. ಆಗಿರುತ್ತದೆ ಎಂದರು.

ಕೆಲವೊಂದು ವೆಚ್ಚಗಳು ಬಜೆಟ್ ನಲ್ಲಿ ನಮೂದಾಗಿರುವುದಿಲ್ಲ. ಆದರೆ ಪ್ರಕೃತಿ ವಿಕೋಪ, ಬರ ಪರಿಸ್ಥಿತಿ ನಿರ್ವಹಿಸಲು ಇಂತಹ ಸಂದರ್ಭಗಳಲ್ಲಿ ಹೆಚ್ಚುವರಿ ದುಡ್ಡು ಖರ್ಚಾಗುತ್ತದೆ. ರೈತರಿಗೆ 2,000 ರೂ. ನೀಡುತ್ತಿರುವುದು ತಾತ್ಕಾಲಿಕ ಮೊದಲನೇ ಕಂತು. ನಂತರ ಕೇಂದ್ರದ ದುಡ್ಡು ಬಂದ ಮೇಲೆ ಪೂರ್ಣ input subsidy  ಕೊಡಲಾಗುವುದು ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಬಗ್ಗೆ ಬಿಜೆಪಿಯವರು ಕೇವಲ ಮಾತನಾಡುತ್ತಾರೆ. 2013 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಂದ ಕಾನೂನನ್ನು  ಬಿಜೆಪಿ ಸರ್ಕಾರ ಯಾವ ರಾಜ್ಯದಲ್ಲಿಯೂ ಮಾಡಿಲ್ಲ. ಇಡೀ ದೇಶದಲ್ಲಿ ತೆಲಂಗಾಣ ಬಿಟ್ಟರೆ ಕರ್ನಾಟಕವೊಂದೇ ಇಂತಹ ಕಾನೂನನ್ನು ಮಾಡಿರುವುದು. ವಿರೋಧ ಪಕ್ಷದವರು ಯಾಕೆ ಸುಮ್ಮನಿದ್ದಾರೆ? ಎಂದು ಪ್ರಶ್ನಿಸಿದರು.

2013 ರಲ್ಲಿ ಪರಿಶಿಷ್ಟ ಜಾತಿಯವರಿಗೆ ಎಸ್ ಸಿ ಎಸ್ ಪಿ , ಪರಿಶಿಷ್ಟ ವರ್ಗದವರಿಗೆ ಟಿಎಸ್ ಪಿ ಹಣದ ಕಾನೂನನ್ನು ಮಾಡಿರುವುದು ನನ್ನ ನೇತೃತ್ವದ ಸರ್ಕಾರ. ಈ ಕಾನೂನನ್ನು ಕೇಂದ್ರವೂ ತರಲಿಲ್ಲ, ಎಸ್ ಸಿ ಪಿ/ ಟಿಎಸ್ ಪಿ ಹಣ ಮುಂಚೆ ದುರುಪಯೋಗವಾಗುತ್ತಿತ್ತು. ಮೊದಲ ಬಾರಿಗೆ ಇವರಿಗೆ ಪ್ರತ್ಯೇಕ ಅನುದಾನವನ್ನು ನೀಡಿದ್ದು ನನ್ನ ಸರ್ಕಾರ. ಮೊದಲು 6 ರಿಂದ 7 ಸಾವಿರ ಕೋಟಿ ವರ್ಷಕ್ಕೆ ಖರ್ಚಾಗುತ್ತಿತ್ತು. ರಾಜ್ಯದಲ್ಲಿ 17.1 % ಜನ ಎಸ್ ಸಿ ಎಸ್ ಟಿ ಜನರಿದ್ದಾರೆ. ಜನಸಂಖ್ಯೆ ಅನುಗುಣವಾಗಿ ಅನುದಾನ ಮೀಸಲಿಡುವ ಕಾರ್ಯವನ್ನು ನಾವು ಮಾಡಿದೆವು ಎಂದರು.

ಸಮಾಜದಲ್ಲಿನ ಅವಕಾಶ ವಂಚಿತರೆಲ್ಲರೂ ನನ್ನ ಜನ. ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವವೆಲ್ಲರಿಗೂ ಶಕ್ತಿ ತುಂಬಬೇಕು. ಕೇಂದ್ರ ಸರ್ಕಾರವು ಇಂತಹ ಕ್ರಮವನ್ನು ತೆಗೆದುಕೊಳ್ಳಲಿ, ಇದಕ್ಕಾಗಿ ಸರ್ವ ಪಕ್ಷ ನಿಯೋಗ ಹೋಗೋಣ ಎಂದು ಹೇಳಿದರು.

2008 ರಿಂದ 2013 ರವರೆಗೆ 22 ಸಾವಿರ ಕೋಟಿ ವೆಚ್ಚ ಮಾಡಲಾಗಿತ್ತು. ಆದರೆ ನಾನು ಅಧಿಕಾರ ಬಿಡುವಾಗ ಎಸ್.ಸಿ / ಎಸ್.ಟಿ ಜನರಿಗೆ ರೂ.88 ಸಾವಿರ ಕೋಟಿ ಅನುದಾನವನ್ನು ನೀಡಲಾಗಿತ್ತು. ಇದು ಕಾಂಗ್ರೆಸ್ ಸರ್ಕಾರದ ಸಾಧನೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕ ಹಕ್ಕು ಇಲ್ಲ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯ ಹಾಗು ಸಂವಿಧಾನಕ್ಕೆ ಬದ್ಧವಾಗಿದೆ ಎಂದರು.

ಗ್ಯಾರಂಟಿಗಳಿಗೆ 38 ಸಾವಿರ ಕೋಟಿ ರೂ.ವನ್ನು ಗ್ಯಾರಂಟಿ ಜಾರಿಯಾದ 1-8-2023 ರಿಂದ ಮಾರ್ಚ್ ವರೆಗೆ ಮೀಸಲಿಟ್ಟಿದೆ. ಎಲ್ಲವೂ ಪಾರದರ್ಶಕವಾಗಿದೆ. ರೈತರಿಗೆ ಬೇರೆ ಕಾರ್ಯಕ್ರಮಗಳನ್ನು ನೀಡಿರುವುದರಿಂದ ಈ ಬಾರಿ 4,000 ರೂ. ಇಟ್ಟಿಲ್ಲ. ಈ ಬಾರಿ 38 ಸಾವಿರ ಕೋಟಿ ಗ್ಯಾರಂಟಿಗಳಿಗೆ ನೀಡಿದೆ. ಫಲಾನುಭವಿಗಳು ಸಂತೋಷವಾಗಿದ್ದಾರೆ ಎಂದು ತಿಳಿಸಿದರು.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

8 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

14 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

18 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

20 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago