2024ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗ ಮಂಗಳವಾರ ಪ್ರಕಟಿಸಿದ್ದು, ಶಕ್ತಿ ದುಬೆ ಪ್ರಥಮ ರ‍್ಯಾಂಕ್
ಪಡೆದಿದ್ದಾರೆ.
ದುಬೆ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಪದವಿ (Bachelor of Science) ಪಡೆದಿದ್ದಾರೆ. ಅವರು ರಾಜ್ಯಶಾಸ್ತ್ರ ಮತ್ತು ಅಂತಾರಾಷ್ಟ್ರೀಯ ಸಂಬಂಧ ವಿಷಯವನ್ನು ಐಚ್ಛಿಕ ವಿಷಯವನ್ನಾಗಿ ತೆಗೆದುಕೊಂಡು ಪರೀಕ್ಷೆಗೆ ಅರ್ಹರಾಗಿದ್ದರು ಎಂದು ಆಯೋಗದ ಹೇಳಿಕೆ ತಿಳಿಸಿದೆ.
ಹರ್ಷಿತಾ ಗೋಯಲ್ ಅವರು 2ನೇ Rank ಪಡೆದುಕೊಂಡಿದ್ದಾರೆ. ಇವರು ಬರೋಡಾದ ಎಂಎಸ್ ವಿಶ್ವವಿದ್ಯಾನಿಲಯದಿಂದ ಬಿ.ಕಾಂ ಪದವಿ ಪಡೆದಿರುವ ಹರ್ಷಿತಾ ಗೋಯಲ್ ಕೂಡಾ ರಾಜಕೀಯ ವಿಜ್ಞಾನ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು,
ವೆಲ್ಲೂರಿನ VITಯಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿ (ಬಿಟೆಕ್) ಹೊಂದಿರುವ ಡೋಂಗ್ರೆ ಅರ್ಚಿತ್ ಪರಾಗ್, ತತ್ವಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ಮೂರನೇ ಸ್ಥಾನದಲ್ಲಿದ್ದಾರೆ.
ಭಾರತೀಯ ಆಡಳಿತ ಸೇವೆ IAS,ಭಾರತೀಯ ಪೊಲೀಸ್ ಸೇವೆ (IPS) ಭಾರತೀಯ ವಿದೇಶಾಂಗ ಸೇವೆ (IFS)ಮತ್ತಿತರ ಹುದ್ದೆಗಳಿಗೆ ಆಯ್ಕೆ ಮಾಡಲು ಯುಪಿಎಸ್ ಸಿ ಪ್ರಿಲಿಮರಿ, ಮುಖ್ಯ ಮತ್ತು ಸಂದರ್ಶನ ಮೂರು ಹಂತದಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಕಳೆದ ವರ್ಷ ಜೂನ್ 16 ರಂದು ಪ್ರಿಲಿಮರಿ ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಗೆ ಒಟ್ಟು 9,92,599 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 5,83,213 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸೆಪ್ಟೆಂಬರ್ 2024 ರಲ್ಲಿ ನಡೆದ ಮುಖ್ಯ ಪರೀಕ್ಷೆಗೆ ಹಾಜರಾಗಲು ಒಟ್ಟು 14,627 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರು. ಈ ಪೈಕಿ 2,845 ಅಭ್ಯರ್ಥಿಗಳು ವ್ಯಕ್ತಿತ್ವ ಪರೀಕ್ಷೆ ಅಥವಾ ಸಂದರ್ಶನಕ್ಕೆ ಆಯ್ಕೆಯಾಗಿದ್ದರು. ಇವರಲ್ಲಿ 1,009 ಅಭ್ಯರ್ಥಿಗಳನ್ನು (725 ಪುರುಷರು ಮತ್ತು 284 ಮಹಿಳೆಯರು) ವಿವಿಧ ಸೇವೆಗಳಿಗೆ ನೇಮಕ ಮಾಡಲು ಆಯೋಗ ಶಿಫಾರಸು ಮಾಡಿದೆ. ಅಂತಿಮವಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಲ್ಲಿ, ಅಗ್ರ ಸ್ಥಾನ ಪಡೆದ ಐವರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಇದ್ದಾರೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…