2024ರ ಟಿ20 ವಿಶ್ವಕಪ್ ಗೆದ್ದ ಭಾರತ: ಮುಂಬೈನಲ್ಲಿ ಟೀಮ್ ಇಂಡಿಯಾ ಭರ್ಜರಿ ವಿಜಯೋತ್ಸವ ಮೆರವಣಿಗೆ: ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಕಿಕ್ಕಿರಿದು ನೆರೆದಿರುವ ಕ್ರಿಕೆಟ್ ಅಭಿಮಾನಿಗಳು

ಬಾರ್ಬಡೋಸ್‌ನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾದ ಆಟಗಾರರು ಇಂದು ಸ್ವದೇಶಕ್ಕೆ ಆಗಮಿಸಿದೆ.

ತವರಿಗೆ ಆಗಮಿಸಿದ ಕೂಡಲೇ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಭೇಟಿ ಆದ ನಂತರ, ಮುಂಬೈನಲ್ಲಿ ಆಯೋಜನೆಯಾಗಿರುವ ವಿಜಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದಾರೆ.

ವಿಜಯೋತ್ಸವ ಪರೇಡ್ ನಲ್ಲಿ ತಮ್ಮ ನೆಚ್ಚಿನ ಆಟಗಾರರನ್ನು ಸ್ವಾಗತಿಸಿ, ಆಟಗಾರರನ್ನು ಕಣ್ತುಂಬಿಕೊಳ್ಳಲು ವಾಂಖೆಡೆ ಕ್ರೀಡಾಂಗಣದ ಬಳಿ ಜನಸಾಗರವೇ ಸೇರಿದೆ.

ತೆರೆದ ಬಸ್‌ನಲ್ಲಿ ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆ ನಡೆದಿದೆ, ನಾರಿಮನ್ ಪಾಯಿಂಟ್‌ನಿಂದ ಪ್ರಾರಂಭವಾಗಿ ವಿಜಯೋತ್ಸವ ಮೆರವಣಿಗೆ ಮರೀನ್ ಡ್ರೈವ್ ಮೂಲಕ ವಾಂಖೆಡೆ ಕ್ರೀಡಾಂಗಣಕ್ಕೆ ತಲುಪಿದೆ.

ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಮುಂಬೈನ ಗಲ್ಲಿಗಲ್ಲಿಗಳಲ್ಲಿ ಜನ ಸೇರಿದ್ದು, ವಾಂಖೆಡೆ ಕ್ರೀಡಾಂಗಣ ಅಕ್ಷರಶಃ ಅಭಿಮಾನಿಗಳಿಂದ ತುಂಬಿ ಹೋಗಿದೆ.

ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ ಬಹುಮಾನ ಘೋಷಿಸಿದೆ.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

4 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

9 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

24 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago