Categories: ರಾಜ್ಯ

2024ರ ಫೆ.28ರೊಳಗೆ ವಾಣಿಜ್ಯ ಮಳಿಗೆಗಳು ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಅನುಷ್ಠಾನಗೊಳಿಸಲು ಗಡುವು

ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ ಎಂದರು.

ಇದಕ್ಕೂ ಮೊದಲು 2018ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು ಎಂದು‌ ತಿಳಿಸಿದ್ದಾರೆ.

ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿ ಇರತಕ್ಕದ್ದು ಎಂದಿದೆ. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ. ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು. ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ. 3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು, ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ ಎಂದಿದ್ದಾರೆ.

ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರೇ ಆಗಲಿ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದರು.

Ramesh Babu

Journalist

Recent Posts

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

6 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

17 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

18 hours ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

18 hours ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

18 hours ago

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

21 hours ago