2024ರ ಲೋಕಸಭಾ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 8.85 ಲಕ್ಷ ಮತದಾರರು ನೋಂದಣಿ

ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದು ಅಂತಿಮ ಮತದಾರರ ಪಟ್ಟಿಯಲ್ಲಿ 438024 ಪುರುಷ ಮತದಾರರು, 446904 ಮಹಿಳಾ ಮತದಾರರು, 140 ಇತರೆ ಮತದಾರರು ಸೇರಿ ಒಟ್ಟು 885068 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಹೇಳಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪ್ರಸಕ್ತ 2024ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್-2024ಕ್ಕೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದರಿಂದ ನೋಂದಣಿಗಾಗಿ ಮುಂದಿನ ವರ್ಷದ ವಿಶೇಷ ಪರಿಷ್ಕರಣೆಗೆ ಕಾಯುವುದನ್ನು ತಪ್ಪಿಸಲಾಗಿದೆ ಮತ್ತು ಮಧ್ಯಂತರ ಅವಧಿಯಲ್ಲಿ ನಡೆಯುವ ಚುನಾವಣೆಗಳಲ್ಲಿ ಮತಚಲಾವಣೆಗೆ ಅವಕಾಶ ದೊರೆಯಲಿದೆ.

ಮತದಾರರ ಗುರುತಿನ ಚೀಟಿಯನ್ನು ಸಂಬಂಧಪಟ್ಟ ಮತದಾರರಿಗೆ ನೇರವಾಗಿ ಅಂಚೆ ಮೂಲಕ ಕಳುಹಿಸಲಾಗುವುದು.

ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು, ಬೂತ್ ಲೆವೆಲ್ ಏಜೆಂಟ್ (BLA) ಗಳನ್ನು ನೇಮಿಸಲು ಅಗತ್ಯ ಕ್ರಮಕೈಗೊಳ್ಳಬೇಕಾಗಿದೆ.

ಮತದಾರರ ಅಂತಿಮ ಪಟ್ಟಿ ಯು ಪ್ರತಿ ವರ್ಷವು ನಿರಂತರವಾಗಿ ನಡೆಯಲಿದೆ. ಇದರಂತೆ 2024ರ ಮತದಾರರ ಪಟ್ಟಿ ಅಂತಿಮ ಪಟ್ಟಿಯ ಪ್ರತಿಯನ್ನು ಪ್ರಕಟಿಸಲಾಗಿದೆ.

ಜಿಲ್ಲೆಯಲ್ಲಿ ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಿಂದ 8,85,068 ಮತದಾರರು ಇದ್ದಾರೆ. ಇದರಲ್ಲಿ 4,38,024 ಪುರುಷರು, 4,46,904 ಮಹಿಳೆಯರು ಹಾಗೂ 140 ಇತರೆ ಮತದಾರರು ಇದ್ದಾರೆ.

ಒಟ್ಟು ಮತದಾರರ ಸಂಖ್ಯೆಯಲ್ಲಿ 18 ರಿಂದ 19 ವರ್ಷದೊಳಗಿನ 19,090 ಯುವ ಮತದಾರರು,
80 ವರ್ಷ ಮೇಲ್ಪಟ್ಟ 21,425
ಹಿರಿಯ ಮತದಾರರು , 12,417 ಅಂಗವಿಕಲ ಮತದಾರರು ಹಾಗೂ 124 ಸೇವಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಜಿಲ್ಲೆಯ 4 ತಾಲೂಕುಗಳಲ್ಲಿನ ಮತದಾರರ ಪೈಕಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರೇ ಇದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಒಟ್ಟು 2,16,824 ಮತದಾರರಿದ್ದು, ಅದರಲ್ಲಿ 1,09,420 ಮಹಿಳಾ ಮತದಾರರು ಹಾಗೂ 1,07,403 ಪುರುಷ ಮತದಾರರಿದ್ದಾರೆ.

ಹೊಸಕೋಟೆಯಲ್ಲಿ ಒಟ್ಟು 2,35,907 ಮತದಾರರಿದ್ದು, ಅದರಲ್ಲಿ 1,18,815 ಮಹಿಳೆ ಹಾಗೂ 1,17,071 ಪುರುಷ ಮತದಾರರು ಇದ್ದಾರೆ.

ದೇವನಹಳ್ಳಿಯಲ್ಲಿ ಒಟ್ಟು 2,13,408 ಮತದಾರರಿದ್ದು, 1,07,640 ಮಹಿಳಾ ಹಾಗೂ 1,05,753 ಪುರುಷ ಮತದಾರರಿದ್ದಾರೆ.

ನೆಲಮಂಗಲದಲ್ಲಿ 2,18,929 ಮತದಾರರ ಪೈಕಿ 1,11,029 ಮಹಿಳೆ ಹಾಗೂ 1,07,797 ಪುರುಷ ಮತದಾರರಿದ್ದಾರೆ.

ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ 1 ಸಾವಿರ ಪುರುಷರಿಗೆ 1016 ಮಹಿಳೆಯರಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರದಲ್ಲಿ 1011, ಹೊಸಕೋಟೆಯಲ್ಲಿ 1013, ದೇವನಹಳ್ಳಿ 1013 ಹಾಗೂ ನೆಲಮಂಗಲದಲ್ಲಿ ಅತಿ ಹೆಚ್ಚು 1025 ಲಿಂಗಾನುಪಾತ ಕಂಡುಬಂದಿದೆ.

ಜಿಲ್ಲೆಯಲ್ಲಿ 4 ವಿಧಾನಸಭಾ ಕ್ಷೇತ್ರಗಳಿವೆ. ಇದರಲ್ಲಿ ಒಟ್ಟಾಗಿ 1137 ಮತಗಟ್ಟೆಗಳಿವೆ. ಅದರಲ್ಲಿ ದೊಡ್ಡಬಳ್ಳಾಪುರ 276, ಹೊಸಕೋಟೆ 293, ದೇವನಹಳ್ಳಿ 292 ಹಾಗೂ ನೆಲಮಂಗಲ್ಲಿ 276 ಮತಗಟ್ಟೆಗಳಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಮತದಾರರ ಅಂತಿಮ ಪಟ್ಟಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಮತಗಟ್ಟೆಗಳಲ್ಲಿ, ಮತದಾರ ನೋಂದಣಾಧಿಕಾರಿ ಕಚೇರಿಯಲ್ಲಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ, ಈ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ. ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಉಪಸ್ಥಿತರಿದ್ದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 hour ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

2 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

2 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

2 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

5 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

9 hours ago