2024ರ ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಅವರು ಸಿಆರ್ ಪಿಸಿ 1973ರ ಕಲಂ 144(1)ರನ್ವಯ ಡಿ.30 ರ ಸಂಜೆ 6 ಗಂಟೆಯಿಂದ ಜ.1 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ಧರಬೆಟ್ಟ ಮಾಕಳಿದುರ್ಗ, ಆವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಆದೇಶಿಸಿದ್ದಾರೆ.
ಹೊಸ ವರ್ಷದ ಪ್ರಯುಕ್ತ ಪ್ರವಾಸಿ ತಾಣಗಳಲ್ಲಿ ಮೋಜು ಮಸ್ತಿ ನಡೆಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…