2024-ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕಟ

ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸಲಾಗಿರುತ್ತದೆ. ಈ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ಕುರಿತು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳ ವಿಲೇವಾರಿಯನ್ನು ಡಿ.26 (ಮಂಗಳವಾರ)ಕ್ಕೆ ನಿಗದಿಪಡಿಸಲಾಗಿತ್ತು,  ಪರಿಷ್ಕರಿಸಿದ ಅವಧಿಯು ಡಿ 12(ಶುಕ್ರವಾರ) ರವರೆಗೆ ವಿಸ್ತರಿಸಲಾಗಿದೆ. ಆರೋಗ್ಯಕರ ನಿಯತಾಂಕಗಳನ್ನು ಪರಿಶೀಲಿಸುವುದು ಮತ್ತು ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿಯನ್ನು ಪಡೆಯುವುದು ಹಾಗೂ ಡಾಟಾ ಬೇಸ್ ನ್ನು ನವೀಕರಿಸುವುದು ಮತ್ತು ಪೂರಕಗಳ ಮುದ್ರಣವನ್ನು ಜ.01 (ಸೋಮವಾರ)ಕ್ಕೆ ನಿಗದಿ ಪಡಿಸಲಾಗಿತ್ತು. ಇದನ್ನು ಪರಿಷ್ಕರಿಸಿ ಜ. 17 (ಬುಧವಾರ)ಕ್ಕೆ ವಿಸ್ತರಿಸಲಾಗಿದೆ.

ಅಂತಿಮ ಮತದಾರರ ಪಟ್ಟಿ ಯನ್ನು ಪ್ರಕಟಿಸಲು ಜ. 05(ಶುಕ್ರವಾರ)ಕ್ಕೆ ನಿಗದಿಪಡಿಸಲಾಗಿತ್ತು. ಈಗ ಪರಿಷ್ಕರಿಸಿ ಜ. 22(ಸೋಮವಾರ) ಕ್ಕೆ ನಿಗದಿಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿರುವ ಪರಿಷ್ಕೃತ ವೇಳಾಪಟ್ಟಿಯಂತೆ ಸಾರ್ವಜನಿಕರು ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಮಾನದಂಡಗಳಡಿಯಲ್ಲಿ ಅರ್ಹತೆ ಹೊಂದಿರುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವ ಸುವರ್ಣ ಅವಕಾಶವನ್ನು ಉಪಯೋಗಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಶಿವಶಂಕರ.ಎನ್ ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *