ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸಲಾಗಿರುತ್ತದೆ. ಈ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ಕುರಿತು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳ ವಿಲೇವಾರಿಯನ್ನು ಡಿ.26 (ಮಂಗಳವಾರ)ಕ್ಕೆ ನಿಗದಿಪಡಿಸಲಾಗಿತ್ತು, ಪರಿಷ್ಕರಿಸಿದ ಅವಧಿಯು ಡಿ 12(ಶುಕ್ರವಾರ) ರವರೆಗೆ ವಿಸ್ತರಿಸಲಾಗಿದೆ. ಆರೋಗ್ಯಕರ ನಿಯತಾಂಕಗಳನ್ನು ಪರಿಶೀಲಿಸುವುದು ಮತ್ತು ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿಯನ್ನು ಪಡೆಯುವುದು ಹಾಗೂ ಡಾಟಾ ಬೇಸ್ ನ್ನು ನವೀಕರಿಸುವುದು ಮತ್ತು ಪೂರಕಗಳ ಮುದ್ರಣವನ್ನು ಜ.01 (ಸೋಮವಾರ)ಕ್ಕೆ ನಿಗದಿ ಪಡಿಸಲಾಗಿತ್ತು. ಇದನ್ನು ಪರಿಷ್ಕರಿಸಿ ಜ. 17 (ಬುಧವಾರ)ಕ್ಕೆ ವಿಸ್ತರಿಸಲಾಗಿದೆ.
ಅಂತಿಮ ಮತದಾರರ ಪಟ್ಟಿ ಯನ್ನು ಪ್ರಕಟಿಸಲು ಜ. 05(ಶುಕ್ರವಾರ)ಕ್ಕೆ ನಿಗದಿಪಡಿಸಲಾಗಿತ್ತು. ಈಗ ಪರಿಷ್ಕರಿಸಿ ಜ. 22(ಸೋಮವಾರ) ಕ್ಕೆ ನಿಗದಿಪಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿರುವ ಪರಿಷ್ಕೃತ ವೇಳಾಪಟ್ಟಿಯಂತೆ ಸಾರ್ವಜನಿಕರು ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಮಾನದಂಡಗಳಡಿಯಲ್ಲಿ ಅರ್ಹತೆ ಹೊಂದಿರುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವ ಸುವರ್ಣ ಅವಕಾಶವನ್ನು ಉಪಯೋಗಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಶಿವಶಂಕರ.ಎನ್ ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…