2024-25ನೇ ಸಾಲಿನ ‘ಡಿಜಿ ಮತ್ತು ಐಜಿಪಿ ಪ್ರಶಂಸನಾ ಪದಕ’- ಪ್ರಶಸ್ತಿಗೆ ಭಾಜನರಾದ ಹೊಸಹಳ್ಳಿ‌ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ‘ರಾವ್ ಗಣೇಶ್ ಜನಾರ್ಧನ್’

ಉತ್ತಮ ಕಾರ್ಯದಕ್ಷತೆ ತೋರಿದ ಪೊಲೀಸ್‌‍ ಅಧಿಕಾರಿ ಮತ್ತು ಸಿಬ್ಬಂದಿಗೆ ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕ (DG&IGP)ರ ಹೆಸರಿನಲ್ಲಿ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನೀಡಲಾಗುತ್ತಿರುವ ಪ್ರಶಂಸನಾ ಸೇವಾ ಪದಕಕ್ಕೆ 200 ಮಂದಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಆಯ್ಕೆಯಾಗಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಭಾಜನರಾಗಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪೊಲೀಸ್‌ ಇಲಾಖೆಯ ಸಾಧಕರಿಗೆ ಬೆನ್ನು ತಟ್ಟುವ ಕಾರ್ಯ ನಡೀತಿದೆ. ಮೊದಲ ಬಾರಿಗೆ “ಡಿಜಿ & ಐಜಿಪಿ ಪ್ರಶಂಸನಾ ಡಿಸ್ಕ್ 2024-25” ರ ಅಡಿ ಪುರಸ್ಕಾರಕ್ಕೆ ರಾಜ್ಯದ 200 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರು ಈ ಪುರಸ್ಕಾರ ಪಡೆದಿದ್ದಾರೆ.

ಇನ್ಸ್ ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರ ಈ ಸಾಧನೆಗೆ ತಾಲೂಕಿನಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಪೊಲೀಸ್‌ ಇಲಾಖೆಯ ಇತರ ಸಿಬ್ಬಂದಿ, ಸಾರ್ವಜನಿಕರು ಹಾಗೂ ಸ್ನೇಹಿತರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ನೇರವಾಗಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. “ಇವರು ಸಕಾಲದಲ್ಲಿ ಮಾಡಿದ ನ್ಯಾಯಯುತ ಸೇವೆಗೆ ದೊರೆತ ಪ್ರಾಮಾಣಿಕ ಗೌರವ ಇದಾಗಿದೆ. ಇಂತಹ ಸೇವೆಗಳಿಗೆ ಪದಕ ರೂಪದಲ್ಲಿ ಸ್ಮರಣೆ ಸಿಗುವುದು ಮುಂದೆ ಕೆಲಸ ಮಾಡುವವರಿಗೆ ಪ್ರೇರಣೆ” ಎಂದು ಹಿರಿಯರು ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *