2025ರ ಹೊಸ ವರ್ಷಾಚರಣೆ: ಬೆಂ ಗ್ರಾ ಜಿಲ್ಲೆಯ ಈ ಪ್ರಮುಖ ಪ್ರವಾಸಿ ತಾಣಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿದ ಬೆ.ಗ್ರಾ ಜಿಲ್ಲಾಧಿಕಾರಿ

ಹೊಸ ವರ್ಷಾಚರಣೆ-2025ರ ಸಂಬಂಧ ಮುಂಜಾಗೃತ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ಧರಬೆಟ್ಟ, ಮಾಕಳಿದುರ್ಗ ಬೆಟ್ಟ, ಅವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ 2024ರ ಡಿ.30 ರಿಂದ 2025ರ ಜ.01ರವರೆಗೆ ಒಟ್ಟು 03 ದಿನಗಳ ಕಾಲ ಸಾರ್ವಜನಿಕರು ಹೆಚ್ಚಾಗಿ ತೆರಳಿ ಮೋಜು ಮಸ್ತಿ ನಡೆಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಗಳಿರುತ್ತದೆ.

ಈ ಹಿನ್ನಲೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲು ಪೊಲೀಸ್ ಅಧೀಕ್ಷಕರು ಜಿಲ್ಲಾಧಿಕಾರಿ ಅವರಿಗೆ ಪತ್ರ ಮೂಲಕ ಕೋರಿರುತ್ತಾರೆ.

ಉಲ್ಲೇಖಿತ ಪತ್ರದ ಕೋರಿಕೆಯನ್ನು ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ದರಬೆಟ್ಟ, ಮಾಕಳಿದುರ್ಗ‌ ಬೆಟ್ಟ, ಆವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸುವುದು ಸೂಕ್ತವೆಂದು ಮನಗಂಡು ಮುಂಜಾಗೃತ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ 2024ರ ಡಿ.30 ಸಂಜೆ 6.00 ಗಂಟೆಯಿಂದ 2025ರ ಜ.01 ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ಧರಬೆಟ್ಟ, ಮಾಕಳಿದುರ್ಗ, ಆವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

7 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

11 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

11 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

16 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago