2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ.66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.
ಬೆಂ.ಗ್ರಾ ಜಿಲ್ಲೆಗೆ 74.02 ರಷ್ಟು ಫಲಿತಾಂಶ ಹೊಂದಿದೆ. ಜಿಲ್ಲೆಗೆ 9 ನೇ ಸ್ಥಾನ ಪಡೆದಿದೆ.
ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಟೌನ್ ನ ನೀಲಗಿರೇಶ್ವರ ಪ್ರೌಢಶಾಲೆಯ ಸಿ. ಭಾವನ ಎಂಬ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ದೊಡ್ಡಬಳ್ಳಾಪುರ ಟೌನ್ ನ ಮೆಳೆಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಎಂಬ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.