ಬೆಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭಗೊಳ್ಳಲಿದ್ದು, ಈ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಸಿ, ಶಾಲೆಗಳ ಆರಂಭಿಕ ಸಿದ್ಧತೆ ಸಂಬಂಧ ಕೆಲವೊಂದು ಸೂಚನೆ ನೀಡಿದೆ.
ಪಿ.ಎಂ.ಪೋಷಣ್ ಮತ್ತು ಕ್ಷೀರಭಾಗ, ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ 1-10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದೊಂದಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದೆ.
ಶಾಲೆ ಪ್ರಾರಂಭವಾಗುವ ಪೂರ್ವದಲ್ಲಿ ಶಾಲೆಯಲ್ಲಿರುವ ನೀರಿನ ಸಂಪು, ನೀರಿತ ತೊಟ್ಟಿ, ಓವರ್ ಹೆಡ್ ಟ್ಯಾಂಕ್ ಗಳನ್ನು ಚೆನ್ನಾಗಿ ಸ್ವಚ್ಛಗೊಳಿಸಿ ಹೊಸ ನೀರನ್ನು ತುಂಬುವುದು ಹಾಗೂ ಕೊಳಾಯಿ ಪೈಪ್ ಗಳು ಕೆಟ್ಟು ಹೋಗಿದ್ದಲ್ಲಿ ಅಗತ್ಯ ರಿಪೇರಿಯನ್ನ ಮಾಡಿಸಿ ನೀರಿನ ಸರಬರಾಜಿಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದೆ.
ಶಾಲೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸ್ಥಳೀಯ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ದಾನಿಗಳು, ಕಂಪನಿಗಳು, ಜನಪ್ರತಿನಿಧಿಗಳ ಅನುದಾನದಿಂದ ಸಹಾಯ ಫಿಲ್ಟರ್ ಅಳವಡಿಸಿಕೊಳ್ಳುವುದು. ಈಗಾಗಲೇ ಶಾಲೆಯಲ್ಲಿ ಬಳಸುತ್ತಿರುವ ವಾಟರ್ ಫಿಲ್ಟರ್ ಗಳ ಗುಣಮಟ್ಟ ಕಳಪೆಯಾಗಿದ್ದಲ್ಲಿ ಇಲ್ಲವೇ ಕೆಟ್ಟು ಹೋಗಿದ್ದಲ್ಲಿ ಕೂಡಲೇ ಶಾಲಾ ಉಳಿಕೆ ಅನುದಾನದಿಂದ ರಿಪೇರಿ ಮಾಡಿಸಿ ಬಳಕೆಗೆ ಸಿದ್ಧಪಡಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…