2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನರಾಗುತ್ತಿದ್ದಾರೆ.
ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿ, ಜೆಜೆಎಂ ವೈದ್ಯಕೀಯ ಕಾಲೇಜು ಪ್ರಾಧ್ಯಾಪಕ ವೈದ್ಯ ಡಾ ಸುರೇಶ್ ಹನಗವಾಡಿ ಹಾಗೂ ಬೆಂಗಳೂರಿನಲ್ಲಿ ಸುಮಂಗಲಿ ಸೇವಾ ಆಶ್ರಮ ಸ್ಥಾಪಿಸಿ ಮಹಿಳಾ ಸಬಲೀಕರಣ, ಶಿಶು ಸಂರಕ್ಷಣೆ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ದಶಕಗಳಿಂದ ಶ್ರಮಿಸುತ್ತಿರುವ ಸಮಾಜ ಸೇವಕಿ ಎಸ್‌ಜಿ ಸುಶೀಲಮ್ಮ, ಶಿಕ್ಷಣ ಕ್ಷೇತ್ರದ ಸಾಧನೆಗೆ ಬೆಳಗಾವಿಯ ಡಾ.ಪ್ರಭಾಕರ್ ಕೋರೆ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದ ಸಾಧನೆಗೆ ಶಶಿಶೇಖರ ವೆಂಪತಿ, ವಿಜ್ಞಾನ ತಂತ್ರಜ್ಞಾನ ಕ್ಷೇತ್ರದ ಶುಭಾ ವೆಂಕಟೇಶ್ ಅಯ್ಯಂಗಾರ್, ಉದ್ಯಮ ಮತ್ತು ವ್ಯಾಪಾರ ಕ್ಷೇತ್ರದ ಸಾಧ್ಯನೆಗೆ (ಮರಣೋತ್ತರ) ಟಿಟಿ ಜಗನ್ನಾಥ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭ್ಯಸಿದೆ. ಕಲಾ ಕ್ಷೇತ್ರದ ಸಾಧನೆಗೆ ಶತಾವಧಾನಿ ಆರ್ ಗಣೇಶ್ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ವರ್ಷದ ಪದ್ಮ ಪ್ರಶಸ್ತಿಗೆ ಕೇಂದ್ರ ಸರ್ಕಾರವು ಭಾರತದ ಉದ್ದಗಲಕ್ಕೂ ಇರುವ ವಿವಿಧ ರೀತಿಯ ಪ್ರಚಾರವಿಲ್ಲದ ಸಾಧಕರನ್ನು ಗುರುತಿಸಿದೆ. ಇವರಲ್ಲಿ ಹಿಂದುಳಿದ ಮತ್ತು ದಲಿತ ಸಮುದಾಯಗಳು, ಪ್ರಾಚೀನ ಬುಡಕಟ್ಟು ಜನಾಂಗದವರು ಮತ್ತು ದೂರದ ಮತ್ತು ಕಷ್ಟಕರ ಪ್ರದೇಶಗಳಿಂದ ಬಂದವರು ಸೇರಿದ್ದಾರೆ.
ಆರೋಗ್ಯ ರಕ್ಷಣೆ, ಶಿಕ್ಷಣ, ಜೀವನೋಪಾಯ, ನೈರ್ಮಲ್ಯ, ಸುಸ್ಥಿರತೆ ಇತ್ಯಾದಿಗಳನ್ನು ಉತ್ತೇಜಿಸುವಲ್ಲಿ ಕೆಲಸ ಮಾಡುವರು, ದಿವ್ಯಾಂಗರು, ಮಹಿಳೆಯರು, ಮಕ್ಕಳು, ದಲಿತರು ಮತ್ತು ಬುಡಕಟ್ಟು ಜನಾಂಗದವರ ಸೇವೆಗಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟವರು ಇದ್ದಾರೆ.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…
ಸಂವಿಧಾನ ಜಾರಿಯಾಗಿ ಸುಮಾರು 76 ವರ್ಷಗಳ ನಂತರ ವಿಶ್ವ ಭೂಪಟದಲ್ಲಿ ಭಾರತವೆಂಬ ದೇಶದ ಒಟ್ಟು ಸಾಧನೆ, ವೈಫಲ್ಯ ಮತ್ತು ಭವಿಷ್ಯವನ್ನು…