2027 ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ: ಡಿಸಿಎಂ ಡಿ .ಕೆ ಶಿವಕುಮಾರ್

ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಹೊಸಕೋಟೆಗೆ ಶೀಘ್ರ ಮೆಟ್ರೋ ಸಂಪರ್ಕ ಕಲ್ಪಿಸಲು ಅಗತ್ಯ ಯೋಜನೆ ಸಿದ್ಧಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ಹೊಸಕೋಟೆ ಹಾಗೂ 28 ಗ್ರಾಮ ಪಂಚಾಯತಿಗಳ ವತಿಯಿಂದ ಇ-ಸ್ವತ್ತು ಹಾಗೂ ಹಕ್ಕು ಪತ್ರ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲವು ಬೆಂಗಳೂರು ನಗರಕ್ಕೆ ಹೊಂದಿಕೊಂಡಿದ್ದು ತಾಲ್ಲೂಕುಗಳ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು. ಹೊಸಕೋಟೆಯೂ ಸಹ ಬಹಳ ವೇಗವಾಗಿ ಅಭಿವೃದ್ಧಿ ಕಾಣುತ್ತಿದ್ದು ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಮೆಟ್ರೋ ಸಂಪರ್ಕ ಹೊಸಕೋಟೆಗೆ ಕಲ್ಪಿಸಲಾಗುವುದು. ಇದಕ್ಕಾಗಿ ಡಿಪಿಆರ್ ಸಿದ್ದಪಡಿಸಲು ಅಧಿಕಾರಿಗಳು ಸೂಚಿಸುತ್ತೇನೆ ಎಂದರು.

5 ಗ್ಯಾರಂಟಿಗಳಿಂದ ನಮ್ಮ ಕೈಗೆ ಶಕ್ತಿ ತುಂಬಿದೆ. ಬೆಲೆ ಏರಿಕೆ, ಆದಾಯ ಪಾತಾಳಕ್ಕೆ ಇಳಿದ ಸಂಧರ್ಭದಲ್ಲಿ ಗ್ಯಾರಂಟಿ ಜಾರಿ ತಂದೆವು. ಈಗ ಅದೇ ಗ್ಯಾರಂಟಿ ಗಳು ದೇಶಕ್ಕೆ ಮಾದರಿ ಎನಿಸಿಕೊಂಡಿದೆ. ಇತರೆ ರಾಜ್ಯಗಳು ನಮ್ಮ ಗ್ಯಾರಂಟಿಗಳನ್ನು ಫಾಲೋ ಮಾಡುತ್ತಿದ್ದಾರೆ ಎಂದರು.

ನರೇಗಾ ಯೋಜನೆ, ಆಹಾರ ಭದ್ರತೆ ಕಾಯ್ದೆ, ಉಳುವವನಿಗೆ ಭೂಮಿ, ಭಗರ್ ಹುಕುಂ, ಕ್ಷೀರಧಾರೆ ಸಬ್ಸಿಡಿ, ಐದು ಗ್ಯಾರಂಟಿ ಮುಂತಾದ ಯೋಜನೆಗಳು ಕೇಂದ್ರ ಹಾಗೂ ರಾಜ್ಯಗಳಲ್ಲಿ ನಮ್ಮ ಸರ್ಕಾರ ಇದ್ದಾಗಲೇ ಜಾರಿಯಾದವು. ಜನರ ಸೇವೆಯಿಂದ ಸರ್ಕಾರ ಉಳಿಯಲು ಸಾಧ್ಯ. ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ ಎಂದರು.

ಆರನೇ ಗ್ಯಾರಂಟಿ ಇ-ಸ್ವತ್ತು, ಇಂದು ಹೊಸಕೋಟೆಯಲ್ಲಿ 6000 ಇ-ಸ್ವತ್ತು ನೀಡಲಾಗುತ್ತಿದೆ. 1 ಕೋಟಿ 11 ಲಕ್ಷ 11 ಸಾವಿರ ಸ್ವತ್ತು ರಾಜ್ಯಾದ್ಯಂತ ನೀಡಲಾಗುತ್ತಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಿ ಖಾತೆಯಿಂದ ಎ ಖಾತೆಗೆ ಆಸ್ತಿ ವರ್ಗ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ.

ರೈತರ ಕೃಷಿ ಭೂಮಿಗಳಿಗೆ 19000 ಕೋಟಿ ರೂ.ಗಳ ವೆಚ್ಚದಲ್ಲಿ 10 ಹೆಚ್.ಪಿ ವರೆಗೆ ವಿದ್ಯುತ್ ನ್ನು ಪ್ರತಿ ನಿತ್ಯ 07 ಗಂಟೆ ನೀಡುತ್ತಿದ್ದೇವೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆ ಕಟ್ಟೆ, ಕುಡಿಯುವ ನೀರು ತುಂಬಿಸಲು ಸರ್ಕಾರ ಪಣ ತೊಟ್ಟಿದ್ದು 2027 ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ ಗೊಳ್ಳಲಿದೆ ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಮಾತನಾಡಿ ಚುನಾವಣೆಯಲ್ಲಿ ಮಾತು ನೀಡಿದಂತೆ ನಾವು ಎಲ್ಲಾ ಗ್ಯಾರಂಟಿ ಯೋಜನೆಗಳು ಜಾರಿಗೊಳಿಸಿದ್ದು ನುಡಿದಂತೆ ನಡೆದಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಗೆ ಮೆಟ್ರೋ, ಯುಜಿಡಿ, ಎತ್ತಿನಹೊಳೆ ಯೋಜನೆಯು ಆದಷ್ಟು ಬೇಗ ಬರಬೇಕು ಎನ್ನುವುದು ನನ್ನ ಒತ್ತಾಸೆಯಾಗಿದೆ ಎಂದರು.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಐ.ಟಿ.ಬಿ.ಟಿ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ ಸರ್ವರಿಗೂ ಸಮಾನ ಅವಕಾಶ ಎಂಬ ಧ್ಯೇಯ ದೊಂದಿಗೆ ಎಲ್ಲಾ ವರ್ಗದವರಿಗೂ ಸೌಲಭ್ಯ ನೀಡಲಾಗುತ್ತಿದೆ. ನವ ಕರ್ನಾಟಕ ನಿರ್ಮಾಣದ ದಿಟ್ಟ ಹೆಜ್ಜೆ ಇಟ್ಟಿರುವ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ವಿರೋದ ಪಕ್ಷಗಳು ವಿರೋದ ಮಾಡಿದರು ನಾವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಇಡೀ ದೇಶದಲ್ಲಿ ಯಾರು ಜಾರಿಗೆ ತಂದಿಲ್ಲ. ಪ್ರತಿ ಕುಟುಂಬವು 5-6 ಸಾವಿರ ಪ್ರತಿ ತಿಂಗಳು ಉಳಿತಾಯ ಮಾಡಲಾಗುತ್ತಿದೆ‌.

ಗ್ರಾಮೀಣಾಭಿವೃದ್ಧಿ ಇಲಾಖೆ, ಐಟಿ ಇಲಾಖೆಯಲ್ಲಿ ರಾಜ್ಯ ನಂಬರ್ ಒನ್ ಸ್ಥಾನದಲ್ಲಿದ್ದೇವೆ. ನರೇಗಾ ಯೋಜನೆಯಡಿ 13 ಕೋಟಿ ಮಾನವ ದಿನಗಳು ಸೃಜಿಸಿ, ನರೇಗಾ ಕೂಲಿ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆಗಳನ್ನು ನಿರ್ಮಿಸಿದ್ದು. ಅಲ್ಲಿ 50000 ಮಕ್ಕಳು ಕಲಿಯುತ್ತಿದ್ದಾರೆ.

ರಾಜ್ಯದಲ್ಲಿ 8760 ಕಿ.ಮೀ ಗ್ರಾಮೀಣ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈಗಾಗಲೇ ರಾಜ್ಯಾದ್ಯಂತ ಮಾದರಿ ತಾಲ್ಲೂಕು ಪಂಚಾಯಿತಿ ನಿರ್ಮಿಸಲು ಉದ್ದೇಶಿಸಲಾಗಿದ್ದು ಹೊಸಕೋಟೆಯಲ್ಲಿ ಮೊದಲ ಮಾದರಿ ತಾಲ್ಲೂಕು ಪಂಚಾಯಿತಿ ನಿರ್ಮಿಸಲಾಗುವುದು ಎಂದರು.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಅವರು ಮಾತನಾಡಿ ಇಂದಿನ ಕಾರ್ಯಕ್ರಮದಲ್ಲಿ 60 ಗ್ರಾಮಗಳು ಇ-ಸ್ವತ್ತು ಮುಕ್ತ ಎಂದು ಘೋಷಿಸಿದ್ದು 6000 ಇ ಸ್ವತ್ತುನ್ನು ನೀಡಲಾಗುತ್ತಿದೆ. 1010 ನಿವೇಶನ ಹಕ್ಕು ಪತ್ರ ವಿತರಣೆ ಫಲಾನುಭವಿಗಳಿಗೆ ನೀಡಲಾಗುತ್ತಿದೆ ಎಂದರಲ್ಲದೆ. ಹೊಸಕೋಟೆಗೆ ಮೆಟ್ರೋ ಸಂಪರ್ಕ ಹಾಗೂ ಕಾವೇರಿ ನೀರು ಪೂರೈಕೆ, ಮಾದರಿ ತಾಲ್ಲೂಕು ಪಂಚಾಯಿತಿ ನಿರ್ಮಾಣ ಮಾಡಲು ಸಚಿವರಿಗೆ ಮನವಿ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ, ನೆಲಮಂಗಲ ಶಾಸಕ ಶ್ರೀನಿವಾಸ್, ಎಂಎಲ್ಸಿ ರವಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

2 hours ago

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

11 hours ago

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

21 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

22 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

24 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

1 day ago