2031ರ ವೇಳೆಗೆ 317 ಕಿ.ಮೀ.ಗಳ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಸಿಎಂಪಿ ಪ್ಲಾನ್‌ನಲ್ಲಿ ಅನುಮೋದನೆ

ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-1ರ 42.3 ಕಿ.ಮೀ.ಗಳ ಉದ್ದದ ಮಾರ್ಗವನ್ನು ರೂ. 14,133 ಕೋಟಿ ವೆಚ್ಚದಲ್ಲಿ  ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ಇತರ ಗಣ್ಯರೊಂದಿಗೆ  ದೇಶಕ್ಕೆ ಸಮರ್ಪಿಸಿದರು.  ಈ ಯೋಜನೆಗಾಗಿ ಕರ್ನಾಟಕ ಸರ್ಕಾರವು  ರೂ. 5630 ಕೋಟಿಗಳಷ್ಟು ವೆಚ್ಚ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ಮೆಟ್ರೊ ರೈಲು ಯೋಜನೆ ಹಂತ-2ರಲ್ಲಿ 75.06 ಕಿ.ಮೀ.ಗಳ ಉದ್ದದ ಮಾರ್ಗ ಹೊಂದಿದ್ದು, ಸದರಿ ಯೋಜನೆಗೆ ರೂ. 30,695 ಕೋಟಿಗಳ ವೆಚ್ಚವಾಗಲಿದೆ.  ಈಗಾಗಲೇ ಕಾಮಗಾರಿಗಳು ಭರದಿಂದ ನಿರ್ಮಾಣವಾಗುತ್ತಿದ್ದು, 32 ಕಿ.ಮೀ.ಗಳ ಉದ್ದದ ಮಾರ್ಗವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ ಎಂದು ನಿಮಗೆ ತಿಳಿಸಲು ನಾನು ಹರ್ಷಿಸುತ್ತೇನೆ. ಪ್ರಸ್ತುತ ಬೆಂಗಳೂರು ಮೆಟ್ರೋ ಜಾಲದ ಕಾರ್ಯಾಚರಣೆಯು 74 ಕಿ.ಮೀ.ಗಳಿಗೆ ಏರಿಕೆಯಾಗಿದೆ ಎಂದರು.

ನಾಗಸಂದ್ರದಿಂದ ಮಾದವಾರದವರೆಗಿನ ಉತ್ತರ ವಿಸ್ತರಣೆ 3.14 ಕಿ.ಮೀ.ಗಳ ಉದ್ದದ ಮಾರ್ಗವು ಮತ್ತು ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15 ಕಿ.ಮೀ.ಗಳ ಉದ್ದದ ಹೊಸ ಮಾರ್ಗಗಳು ಮುಕ್ತಾಯದ ಹಂತದಲ್ಲಿದ್ದು, ಏಪ್ರಿಲ್ 2024ರ ವೇಳೆಗೆ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲು ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ 21.26 ಕಿ.ಮೀ.ಗಳ ಉದ್ದದ ಹೊಸ ಮಾರ್ಗವನ್ನು ಮಾರ್ಚ್-2025ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಈ ಮಾರ್ಗಗಳನ್ನು ಪೂರ್ಣಗೊಳಿಸುವುದರೊಂದಿಗೆ, ಕಾರ್ಯಾಚರಣೆಯ ಜಾಲವು 117 ಕಿ.ಮೀ.ಗಳಿಗೆ ವಿಸ್ತಾರಗೊಳ್ಳುತ್ತದೆ ಮತ್ತು 12 ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿದೆ ಎಂದರು.

ಹಂತ-2 ಯೋಜನೆಗಾಗಿ, ಕರ್ನಾಟಕ ಸರ್ಕಾರವು ರೂ. 11583.08 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ.

ಓಆರ್‌ಆರ್-ಏರ್‌ಪೋರ್ಟ್ ಮೆಟ್ರೋ ಎಂದು ಕರೆಯಲ್ಪಡುವ 58 ಕಿ.ಮೀ.ಗಳ ಉದ್ದದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಹೆಬ್ಬಾಳ ಜಂಕ್ಷನ್ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಂತ 2ಎ ಮತ್ತು 2ಬಿ ಯೋಜನೆಯನ್ನು ಅಂದಾಜು ರೂ. 14788.1 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, 2026ರ ವೇಳೆಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ.  ಕರ್ನಾಟಕ ಸರ್ಕಾರವು ಇದುವರೆಗೆ ರೂ. 4775.36 ಕೋಟಿ ಬಿಡುಗಡೆ ಮಾಡಲಾಗಿದೆ.  ಈ ಯೋಜನೆಯು ಪೂರ್ಣಗೊಂಡ ನಂತರ, ಮೆಟ್ರೋ ಜಾಲವು 176 ಕಿ.ಮೀ.ಗಳು ಆಗಲಿದೆ ಮತ್ತು ಪ್ರತಿದಿನ ಸುಮಾರು 20 ಲಕ್ಷ ಪ್ರಯಾಣಿಕರು ಸಂಚರಿಸಲಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಬೆಂಗಳೂರು ಮೆಟ್ರೊ ರೈಲು ಯೋಜನೆಯ 3ನೇ ಹಂತದಲ್ಲಿ 45 ಕಿ.ಮೀ.ಗಳ ಉದ್ದದ ಮಾರ್ಗವನ್ನು ಅಂದಾಜು ರೂ. 15,611 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲು ಡಿಪಿಆರ್‌ನ್ನು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ.  ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡುವಂತೆ ನಾನು ಮಾನ್ಯ ಪ್ರಧಾನ ಮಂತ್ರಿಯವರನ್ನು ಕೋರುತ್ತೇನೆ ಎಂದರು.

ಅಲ್ಲದೆ, ಸರ್ಜಾಪುರದಿಂದ ಹೆಬ್ಬಾಳದವರೆಗಿನ 37 ಕಿ.ಮೀ.ಗಳ ಉದ್ದದ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ಎಗೆ ಡಿಪಿಆರ್ ತಯಾರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿದ್ದು, ಕರ್ನಾಟಕ ಸರ್ಕಾರವು 2031ರ ವೇಳೆಗೆ 317 ಕಿ.ಮೀ.ಗಳ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಸಿಎಂಪಿ ಪ್ಲಾನ್‌ನಲ್ಲಿ ಅನುಮೋದಿಸಿದೆ.  ಈಗಾಗಲೇ 257 ಕಿ.ಮೀ.ಗಳ ಮಾರ್ಗವು ಕಾರ್ಯಾಚರಣೆ, ನಿರ್ಮಾಣ ಮತ್ತು ಯೋಜನೆ ಹಂತದಲ್ಲಿದೆ.  ಇನ್ನುಳಿದ 60 ಕಿ.ಮೀ.ಗಳ ಮೆಟ್ರೊ ಮಾರ್ಗಗಳ ಕಾರ್ಯಸಾಧ್ಯತೆಯ ಸಮೀಕ್ಷೆಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದರು.

ಸಾಧಾರಣ ಬಡ್ಡಿದರಗಳೊಂದಿಗೆ ದೀರ್ಘಾವಧಿ ಸಾಲವನ್ನು ಒದಗಿಸುವ ಮೂಲಕ ಬೆಂಗಳೂರು ಮೆಟ್ರೋ ರೈಲು ಯೋಜನೆಗೆ ಬೆಂಬಲ ನೀಡಿದ ಎಲ್ಲಾ ವಿದೇಶೀ ಹಣಕಾಸು ಸಂಸ್ಥೆಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. ಈ ಯೋಜನೆಯಲ್ಲಿ ಕೆಲಸ ಮಾಡಿದ ಎಲ್ಲಾ ಗುತ್ತಿಗೆದಾರರಿಗೆ ಹಾಗೂ ಈ ಯೋಜನೆಗಳಲ್ಲಿ ತೊಡಗಿರುವ 14 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

8 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

21 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

21 hours ago