2047ರ ಹೊತ್ತಿಗೆ ಭಾರತವನ್ನ ಅಭಿವೃದ್ಧಿ ರಾಷ್ಟ್ರವಾಗಿಸುವುದು ಸರ್ಕಾರದ ಧ್ಯೇಯ- ಡಾ.ಕೆ.ಎಂ.ಸುಸೀಂದ್ರನ್‌

2047ರ ಹೊತ್ತಿಗೆ ನಮ್ಮ ದೇಶವನ್ನು ಪರಿಪೂರ್ಣ ಅಭಿವೃದ್ಧಿ ಸಾಧಿಸಿದ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಹಾಗೂ ವಿಶ್ವಗುರು ಸ್ಥಾನಕ್ಕೇರಿಸುವುದು ಭಾರತ ಸರ್ಕಾರದ ಗುರಿಯಾಗಿದೆ, ಇಂದಿನ ಯುವಜನತೆಗೆ ನಮ್ಮ ದೇಶದ ಪ್ರಧಾನಿಯವರು ಹೇಳಿದಂತೆ ಇದು ನಿಜಕ್ಕೂ ಅಮೃತಕಾಲ ಎಂದು ಟಾಟಾ ಕನ್‌ಸಲ್ಸ್ ಸರ್ವಿಸಸ್ (ಟಿ.ಸಿ.ಎಸ್)ನ ವಿದ್ವತ್ ವಿನಿಮಯ ವಿಭಾಗದ ಮುಖ್ಯಸ್ಥ ಡಾ. ಕೆ.ಎಂ. ಸುಸೀಂದ್ರನ್‌ ಹೇಳಿದರು.

ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜನೆಗೊಂಡಿದ್ದ 2023-2027ರ ಅವಧಿಯ ಇಂಜಿನಿಯರಿಂಗ್ ಕಲಿಕೆಯ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ನಮ್ಮ ಯುವ ಜನತೆ ದೇಶವನ್ನು ಸಮಗ್ರವಾಗಿ ಮುನ್ನೆಡೆಸುವ ಗುರುತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ನನಗಿದೆ ಎಂದರು.

ಯುವಜನರನ್ನ ಪರಿಣಿತ ತಂತ್ರಜ್ಞರನ್ನಾಗಿ ರೂಪಿಸಲು ಹಲವು ವಿದ್ಯಾ ಸಂಸ್ಥೆಗಳು ಶ್ರಮಪಡುತ್ತಿವೆ, ಅದರಲ್ಲೂ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಹಗುರಗೊಳಿಸಲು ಸಮರ್ಥವಾಗಿದ್ದು, ಟಿ.ಸಿ.ಎಸ್ ಕೂಡ ಈ ಮಹತ್ವದ ಯಾನದಲ್ಲಿ ಕೈಜೋಡಿಸಲಿದೆ. ಇದೀಗ ತಾನೆ ನಮ್ಮ ಸಂಸ್ಥೆ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಜತೆ ಒಪ್ಪಂದ ಮಾಡಿಕೊಂಡಿದೆ. ಅದರ ಪ್ರಕಾರ ನಾವು ಆಗಾಗ್ಗೆ ಬಂದು ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ ಹಾಗೂ ಕೌಶಲ್ಯದ ಸಾಮರ್ಥ್ಯಗಳನ್ನು ಪರಿಶೀಲಿಸಲಿದ್ದೇವೆ ಮತ್ತು ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ನೆರವಾಗಲಿದ್ದೇವೆ ಎಂದು ತಿಳಿಸಿದ್ದಾರೆ.

ತಂತ್ರಜ್ಞಾನದ ಅನ್ವೇಷಣೆಗಳು ಪ್ರತಿದಿನ, ಪ್ರತಿಕ್ಷಣ ಏರುಮುಖವಾಗಿ ಸಕಾರಾತ್ಮಕ ತಿರುವುಗಳನ್ನು ಪಡೆದುಕೊಳ್ಳುತ್ತಿರುವ ಕಾರಣ ವಿದ್ಯಾರ್ಥಿಗಳಿಗೆ ‘ನಿರಂತರ ಕಲಿಕೆ’ ಅನಿವಾರ್ಯವಾಗಿದೆ ಎಂದರು.

ಪದವಿ ಪಡೆದ ನಂತರವೂ ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರವಾಗಿ ಸಾಗಬೇಕಿದೆ. ಆಗಲೇ ನಾವು ನಮ್ಮ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸಲು ಸಾಧ್ಯವಾಗುತ್ತದೆ. ಇದಲ್ಲದೆ ವಿದ್ಯಾರ್ಥಿಗಳು ತಾವು ವಿಧಿವತ್ತಾಗಿ ಕಲಿಯುವ ವಿದ್ಯೆಯ ಜತೆ, ತಮ್ಮ ಸ್ವ ಇಚ್ಛೆಯಿಂದ ಪ್ರೀತಿಸುವ ವಿಷಯವನ್ನೂ ಅಧ್ಯಯನ ಮಾಡಬೇಕು. ಇದಕ್ಕಾಗಿ ಪ್ರತಿದಿನ ಹತ್ತು ನಿಮಿಷ ಮೀಸಲಿಟ್ಟರೂ ಸಾಕು. ಕಲಿಯುವ ವಿದ್ಯೆ ಇಂಜಿನಿಯರಿಂಗ್ ಆದರೂ ಪ್ರೀತಿಸುವ ವಿಷಯ ಸಮಾಜಸೇವೆ, ರಾಜಕೀಯ, ಆಡಳಿತ ಇತ್ಯಾದಿ ಇತ್ಯಾದಿ’, ಯಾವುದಾದರೂ ಆಗಬಹುದು. ಎಂದು ಅಭಿಪ್ರಾಯಪಟ್ಟರು.

ನಂತರ ನಿಟ್ಟೆ ಶಿಕ್ಷಣ ಸಂಸ್ಥೆಗಳ ಹಿರಿಯ ಸಲಹೆಗಾರ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್‌.ಆರ್. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಪ್ರೌಢಾವಸ್ಥೆಯಲ್ಲಿದ್ದು, ಉನ್ನತ ಶಿಕ್ಷಣ ಕಲಿಕೆಗೆ ದಾಖಲಾಗಿದ್ದಾರೆ. ಮೊದಲು ಅವರು ತಮ್ಮ ಬಾಲ್ಯದ ಮನಸ್ಥಿತಿಯಿಂದ ಹೊರ ಬಂದು ತಮ್ಮ ಜ್ಞಾನ ಹಾಗೂ ಕೌಶಲ್ಯದ ಅಭಿವೃದ್ಧಿಗೆ ನಿರಂತರ ಅಧ್ಯಯನದಲ್ಲಿ ತೊಡಗಬೇಕು ಎಂದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಹೆಚ್.ಸಿ, ನಾಗರಾಜ್‌ ಸ್ವಾಗತಿಸಿ, ಸಂಸ್ಥೆಯಲ್ಲಿ ಕೌಶಲ್ಯದ ಅಭಿವೃದ್ಧಿಗೆ ಇರುವ ಅವಕಾಶಗಳ ಬಗ್ಗೆ ಸಭಿಕರ ಗಮನ ಸೆಳೆದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

7 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

7 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

7 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

8 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

11 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

14 hours ago