ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮುಂಗಾರು ರೀತಿಯ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಮೇ 21ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ 24 ಅಥವಾ 25ರಿಂದ ಮಳೆ ಹೆಚ್ಚಾಗುವ ಸೂಚನೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮೇ 21ರಿಂದ ಮಳೆಯ ಪ್ರಮಾಣ ಇಳಿಕೆಯಾಗದರೂ 24ರಿಂದ 2 ಅಥವಾ 3 ದಿನಗಳ ಕಾಲ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬಾಗಲಕೋಟೆ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಮೇ 21ರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಮೇ 22ರಿಂದ ಮಳೆಯ ಪ್ರಮಾಣ ಇಳಿಕೆಯಾಗಲಿದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮದಿಂದ ಕರಾವಳಿಯಲ್ಲಿ ಅರಬ್ಬಿ ಸಮುದ್ರದ ಮೋಡಗಳಿಂದ ಮಳೆಯಾಗುತ್ತಿದ್ದರೆ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಬಂಗಾಳ ಕೊಲ್ಲಿಯ ಭಾಗದಿಂದ ಮೋಡಗಳು ಪಶ್ಚಿಮಕ್ಕೆ ಸೆಳೆಯಲ್ಪಡುವುದರಿಂದ ಮಳೆಯಾಗುತ್ತಿದೆ.
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…