2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಇಂದು ಪ್ರಕಟಗೊಂಡಿದೆ, 224 ವಿಧಾನಸಭೆ ಕ್ಷೇತ್ರಗಳಿಗೆ ಮೇ.10ರಂದು ಮತದಾನ ನಡೆಯಲಿದ್ದು, ಮೇ.13 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.
ಮಾ.29ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ನಿರ್ಧಾರ ಮಾಡಲಾಗಿದೆ.
ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟ, ಏಪ್ರಿಲ್ 20 ರಂದು ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಮೇ.10 ರ ಬುಧವಾರ ಮತದಾನ ನಡೆಯಲಿದ್ದು, ಮೇ 15 ರೊಳಗೆ ಮತದಾನದ ಸಂಪೂರ್ಣ ಪ್ರಕ್ರಿಯೆ ಮುಗಿಯಲಿದೆ.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಲಾಗಿದೆ. ಕರ್ನಾಟಕದಲ್ಲಿ ಪುರುಷ ಮತದಾರರು 2,62,42,561 ಇದ್ದು, 2,59,26,319 ಮಹಿಳಾ ಮತದಾರರು ಇದ್ದಾರೆ. ಇನ್ನೂ 4,699 ತೃತೀಯ ಲಿಂಗಿಗಳು ಮತದಾರರು ಇದ್ದು, 12.15 ಲಕ್ಷ ಯುವ ಮತದಾರರು ಇದ್ದಾರೆ.
ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಮಾಹಿತಿ ನೀಡಿದರು.
ಇದೇ ಮೊದಲ ಬಾರಿಗೆ ಮತದಾನ ಮಾಡುವ 18-19 ವಯಸ್ಸಿನ ಮತದಾರರ ಸಂಖ್ಯೆ 9,17,241. ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ.
ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾಗಿವೆ.
ಯುವಕರಿಗಾಗಿ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯರಿಗಾಗಿ 1320 ಮತಗಟ್ಟೆಗಳು ಸೇರಿ ಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ.
ಚುನಾವಣಾ ಆಯೋಗದ ಆ್ಯಪ್‌ನಲ್ಲಿ ಅಭ್ಯರ್ಥಿಗಳ ಸಂಪೂರ್ಣ ವಿವರ ಲಭ್ಯವಿರುತ್ತದೆ. ಅಭ್ಯರ್ಥಿಯ ಅಫಿಡವಿಟ್ ಕೂಡ ಆ್ಯಪ್‌ನಲ್ಲೇ ಲಭ್ಯವಿರಲಿದ್ದು, ಚುನಾವಣಾ ಅಕ್ರಮದ ಬಗ್ಗೆ ಆ್ಯಪ್‌ನಲ್ಲೇ ಮತದಾರರು ದೂರು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಿದರೆ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಭರವಸೆ ನೀಡಿದೆ. ಚುನಾವಣಾ ಅಕ್ರಮ ತಡೆಗೆ 2400 ತಂಡಗಳ ರಚನೆ ಮಾಡಲಾಗಿದೆ.
ಭಾರತದ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನದ ದಿನಾಂಕಗಳನ್ನು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಮಾ.29ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜಕೀಯ ನಾಯಕರು, ಪಕ್ಷಗಳು, ಅಧಿಕಾರಿಗಳು, ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲರೂ ಈ ನೀತಿಸಂಹಿತೆಗೆ ಬದ್ಧರಾಗಿರಬೇಕಾಗುತ್ತದೆ.
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…