ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ತೆಗೆಯುವಿಕೆಗೆ ಅವಕಾಶ:18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ತೆಗೆಯುವಿಕೆಗೆ ಅವಕಾಶ: 18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯು ಅಕ್ಟೋಬರ್ 29 ರಂದು ಪ್ರಾರಂಭಗೊಂಡಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ತೆಗೆಯುವಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್ ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ವೇಳಾಪಟ್ಟಿ ಯನ್ನು ಪ್ರಕಟಿಸಲಾಗಿದ್ದು, ಮತದಾರರ ಪಟ್ಟಿಗಳ ಕರಡು ಪ್ರಕಟಣೆಯನ್ನು ಅಕ್ಟೋಬರ್ 29 (ಮಂಗಳವಾರ) ಕ್ಕೆ ನಿಗದಿಪಡಿಸಲಾಗಿದೆ‌. ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ ಅಕ್ಟೋಬರ್ 29 ರಂದು (ಮಂಗಳವಾರ) ದಿಂದ ನವೆಂಬರ್ 28 ರ (ಗುರವಾರ) ವರೆಗೆ ಅವಕಾಶವಿರುತ್ತದೆ. ವಿಶೇಷ ಅಭಿಯಾನದ ದಿನಾಂಕಗಳು ಸಿಇಒ ಗಳ ಸೂಚನೆಯಂತೆ ನಿಗಧಿಪಡಿಸಲಾಗುತ್ತದೆ. ಹಕ್ಕುಗಳ ಮತ್ತು ಆಕ್ಷೇಪಣೆಗಳ ವಿಲೇವಾರಿ ಡಿಸೆಂಬರ್ 24 (ಮಂಗಳವಾರ) ನಿಗದಿಪಡಿಸಲಾಗಿದೆ. ಮತದಾರರ ಪಟ್ಟಿಗಳ ಅಂತಿಮ ಪ್ರಕಟಣೆಯನ್ನು ಜನವರಿ 06 2025 (ಸೋಮವಾರ)‌ ನಿಗಧಿಪಡಿಸಲಾಗಿದೆ‌. ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿರುವ ವಿಶೇಷ ಪರಿಷ್ಕೃತ ವೇಳಾಪಟ್ಟಿಯಂತೆ ಸಾರ್ವಜನಿಕರು ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಮಾನದಂಡಗಳಡಿಯಲ್ಲಿ ಅರ್ಹತೆ ಹೊಂದಿರುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವ ಸುವರ್ಣ ಅವಕಾಶವನ್ನು ಉಪಯೋಗಿಸಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಭಾರತದ ಚುನಾವಣಾ ಅಯೋಗದ ಇತ್ತೀಚಿನ ತಿದ್ದುಪಡಿ ನಿಯಮಗಳಂತೆ ಪ್ರಸ್ತುತ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು 04 ಅರ್ಹತಾ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಅದರಂತೆ ಜನವರಿ 01, ಏಪ್ರಿಲ್ 01, ಜುಲೈ 01 ಮತ್ತು ಅಕ್ಟೋಬರ್ 01 ಕ್ಕೆ 18 ವರ್ಷ ತುಂಬುವ ಯುವ ಮತದಾರರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸುವ ಅವಕಾಶವಿದೆ‌ ಎಂದು ಹೇಳಿದರು.

ಮನೆ ಮನೆ ಸಮೀಕ್ಷೆ ವೇಳೆ ಬೂತ್‌ ಮಟ್ಟದಲ್ಲಿ ಹೊಸ ಮನೆಗಳು ನಿರ್ಮಾಣಗೊಂಡು ಅಲ್ಲಿ ಜನ ವಾಸವಿದ್ದರೆ ಅಥವಾ ಅಲ್ಲಿಂದ ಬೇರೆಡೆ ಸ್ಥಳಾಂತರಗೊಂಡವರ ಮಾಹಿತಿ ಸಂಗ್ರಹಿಸಿ, ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಬೇರೆಡೆಗೆ ಸ್ಥಳಾಂತರಗೊಂಡವರು ಹಾಗೂ ಮೃತಪಟ್ಟವರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುವುದು. ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಮನೆ ಮನೆ ಭೇಟಿ ನೀಡುವ ಬಿಎಲ್ಒಗಳಿಗೆ ಅಗತ್ಯ ಮಾಹಿತಿಯನ್ನು ನೀಡಿ ಸಾರ್ವಜನಿಕರು ಸಹಕರಿಸಬೇಕು
ಎಂದು ತಿಳಿಸಿದರು.

ಮತದಾರರ ಗುರುತಿನ ಚೀಟಿಯಲ್ಲಿ (Voter ID)ಅಕ್ಷರ ದೋಷ ಕಂಡುಬರುತ್ತಿದ್ದು, ಇದನ್ನು ಸರಿಪಡಿಸ ಬೇಕೆಂದು ರಾಜಕೀಯ ಮುಖಂಡರು ಪ್ರಸ್ತಾಪಿಸಿದರು. ಇದರ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ನಾಲ್ಕು ತಾಲ್ಲೂಕುಗಳ ವಿಧಾನ ಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯಂತೆ ಮತದಾರ 446422 ಪುರುಷ ಮತದಾರರು, 457380 ಮಹಿಳಾ ಮತದಾರರು, 143 ಇತರೆ ಮತದಾರರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 9,03,945 ಕರಡು ಮತದಾರರಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಧಾನ ಸಭಾ ಕ್ಷೇತ್ರದ ಗ್ರಾಮಾಂತರ ಪ್ರದೇಶದ 258 ಮತಗಟ್ಟೆಗಳು, ನಗರ ಪ್ರದೇಶದ 879 ಮತಗಟ್ಟೆಗಳು, ಪರಿಷ್ಕರಣೆ ನಂತರ ಹೊಸದಾಗಿ ಸೃಜಿಸಿರುವ ಮತಗಟ್ಟೆಗಳು 4 ಸೇರಿದಂತೆ ಒಟ್ಟು ಮತಗಟ್ಟೆಗಳು 1141 ಆಗಿರುತ್ತದೆ‌. ಕರಡು ಮತದಾರರ ಪಟ್ಟಿಯಂತೆ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರ ಪುರುಷರಿಗೆ 1025 ಮಹಿಳಿಯರು ಇದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ರಾಜಕೀಯ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

7 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

17 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

19 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

24 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago