ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಇಂದು ವಿಸ್ತರಣೆಯಾಗುವ ಸಾಧ್ಯತೆ ಇದೆ, ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಇಂದು ಪ್ರಮಾಣವಚನ ಸ್ವೀಕರಿಸಲಿರುವ 24 ನೂತನ ಸಚಿವ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.
ಸಂಪುಟ ವಿಸ್ತರಣೆ ಕುರಿತು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ತೀವ್ರ ಕಸರತ್ತು ನಡೆಸಿದ್ದ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆಯ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಇಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ 24 ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.
ನೂತನ ಸಚಿವರ ಪಟ್ಟಿ
1.ಎಚ್.ಕೆ.ಪಾಟೀಲ್
2.ಕೃಷ್ಣ ಭೈರೇಗೌಡ
3.ಚಲುವರಾಯಸ್ವಾಮಿ
4.ಕೆ ವೆಂಕಟೇಶ್
5.ಎಚ್.ಸಿ.ಮಹದೇವಪ್ಪ
6.ಈಶ್ವರ ಖಂಡ್ರೆ
7.ಕೆ.ಎನ್.ರಾಜಣ್ಣ
8.ದಿನೇಶ್ ಗುಂಡೂರಾವ್
9.ಶರಣಬಸಪ್ಪ ದರ್ಶನಾಪುರ
10.ಶಿವಾನಂದ ಪಾಟೀಲ್
11.ಆರ್.ಬಿ.ತಿಮ್ಮಾಪುರ
12.ಎಸ್.ಎಸ್.ಮಲ್ಲಿಕಾರ್ಜುನ,
13.ಶಿವರಾಜ ತಂಗಡಗಿ
14.ಡಾ.ಶರಣ ಪ್ರಕಾಶ್ ಪಾಟೀಲ್
15.ಮಂಕಾಳು ವೈದ್ಯ,
16.ಲಕ್ಷ್ಮೀ ಹೆಬ್ಬಾಳ್ಕರ್
17.ರಹೀಂ ಖಾನ್
18.ಡಿ.ಸುಧಾಕರ್
19.ಸಂತೋಷ್ ಲಾಡ್
20.ಬೋಸರಾಜು
21.ಬಿ.ಎಸ್.ಸುರೇಶ್
22.ಮಧು ಬಂಗಾರಪ್ಪ
23.ಎಂ.ಸಿ.ಸುಧಾಕರ್
24.ಬಿ.ನಾಗೇಂದ್ರ
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…