ಪಾರಂಪರಿಕ ಮಟ್ಟಿ‌ ಕುಸ್ತಿ ಕಲೆಯನ್ನ ಮುಂದಿನ ಪೀಳಿಗೆಗೆ ಪರಿಚಯಿಸಬೇಕು -ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್


ನಮ್ಮ ಪಾರಂಪರಿಕ ಕ್ರೀಡೆಯಾದ ಕುಸ್ತಿಯನ್ನು ಜನಪ್ರಿಯಗೊಳಿಸಿ, ಇಂದಿನ ಹಾಗೂ ಮುಂದಿನ ಪೀಳಿಗೆಗೆ ಕುಸ್ತಿ ಕಲೆಯನ್ನು ಕಲಿಸುವ ಸಲುವಾಗಿ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದ್ದು, ‌ಇದೇ ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಬಯಲು ಬಸವಣ್ಣ ಕಡಲೇಕಾಯಿ ಪರಿಷೆ ಇದ್ದು, ಇದರ ಅಂಗವಾಗಿ 9 ಜಿಲ್ಲೆಗಳ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕು ದಶಕಗಳಿಂದ ಕುಸ್ತಿ ಕಲೆಗೆ ಹೆಸರುವಾಸಿಯಾಗಿದ್ದು, ಮೈಸೂರಿನಲ್ಲಿ ನಡೆಯುವ ಕುಸ್ತಿ ಪಂದ್ಯಾವಳಿಗಳಲ್ಲಿ ಇಂದಿನ ಕುಸ್ತಿ ಪಟುಗಳು ಭಾಗವಹಿಸಿ, ಬಹುಮಾನ ಗಳಿಸಿದ್ದಾರೆ. ಕುಸ್ತಿ ಕಲೆಗೆ ಉತ್ತೇಜಿನ ನೀಡುವ ಸಲುವಾಗಿ ತಾಲೂಕಿನ ಗರಡಿ ಮನೆಗಳ ಸಹಕಾರದೊಂದಿಗೆ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದೆ ಎಂದರು.

ನ.25ರ ಪಂದ್ಯಾವಳಿಗಳನ್ನು ನಡೆಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಇನ್ನು ಮುಂದೆ ಸಂಘದಿಂದ ಪಂದ್ಯಾವಳಿಗಳಷ್ಟೇ ಅಲ್ಲದೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಕುಸ್ತಿ ತರಬೇತಿಯನ್ನು ನೀಡಲಾಗುವುದು ಎಂದರು.

ಸಂಘದ ಗೌ.ಅಧ್ಯಕ್ಷ ಪೈಲ್ವಾನ್ ಚೌಡಪ್ಪ ಮಾತನಾಡಿ, ಮಟ್ಟಿ ಕುಸ್ತಿ ಕಲೆ ನಮ್ಮ ತಲೆಮಾರಿಗೆ ಕೊನೆಯಾಗುವುದು ಬೇಡ. ಇಂದಿನ ಹಾಗೂ ಮುಂದಿನ ಪೀಳಿಗೆಗೂ ಗರಡಿ ಮನೆಗಳ ಪರಿಚಯವಾಗಬೇಕು. ಇಂದಿನ ಪೀಳಿಗೆ ಕುಸ್ತಿ ಕಲಿತರೆ ಸಾಕಷ್ಟು ಪ್ರಯೋಜನಗಳಿವೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡುವ ಅವಕಾಶಗಳಿವೆ. ಈ ದಿಸೆಯಲ್ಲಿ ಆಯೋಜಿಸುತ್ತಿರುವ ಈ ಕುಸ್ತಿ ಪಂದ್ಯಾವಳಿಗಳನ್ನು ನಮ್ಮ ಜನ ಪ್ರೋತ್ಸಾಹಿಸಬೇಕಿದೆ ಎಂದರು.

ಸಂಘದ ಕಾರ್ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಗಣೇಶ್ ರಾಜಘಟ್ಟ,ಕುಸ್ತಿ ಪಂದ್ಯಾವಳಿಗಳ ಮಾಹಿತಿ ನೀಡಿ, ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಕೊಂಗಾಡಿಯಪ್ಪ ಕಾಲೇಜು ರಸ್ತೆ ಬಯಲು ಬಸವಣ್ಣ ದೇವಾಲಯದ ಮುಂಭಾಗದ ಬಯಲಿನಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದರು.

ಕುಸ್ತಿಪಟುಗಳ ತೂಕಗಳ ಮಾನದಂಡಕ್ಕೆ ಅನುಸಾರವಾಗಿ, ದೊಡ್ಡಬಳ್ಳಾಪುರ ಯುವ ಕಿಶೋರ, ದೊಡ್ಡಬಳ್ಳಾಪುರ ಕಿಶೋರ, ದೊಡ್ಡಬಳ್ಳಾಪುರ ಕುಮಾರ, ದೊಡ್ಡಬಳ್ಳಾಪುರ ಕೇಸರಿ, ದೊಡ್ಡಬಳ್ಳಾಪುರ ಕಂಠೀರವ, ಹಾಗೂ ಮಹಿಳಾ ವಿಭಾಗದಲ್ಲಿ (60 ಕೆ.ಜಿ. ಒಳಗಿನ ವಿಭಾಗ) ದೊಡ್ಡಬಳ್ಳಾಪುರ ಕಿಶೋರಿ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ. ರಾಜ್ಯದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ 9 ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಲಿದ್ದು, ಈಗಾಗಲೇ ಸುತ್ತೋಲೆ ಕಳುಹಿಸಲಾಗಿದೆ ಎಂದು ಹೇಳಿದರು.

ಕುಸ್ತಿ ಪಂದ್ಯಾವಳಿಗಳು ಸಾಂಪ್ರದಾಯಿಕ ಮಣ್ಣಿನ ಅಖಾಡ (ಮಟ್ಟಿ)ದಲ್ಲಿ ನಡೆಯಲಿವೆ. ಕುಸ್ತಿ ಪಂದ್ಯಾವಳಿಗಳನ್ನು ಅಂತಾರಾಷ್ಟ್ರೀಯ ನಿಯಮಗಳ ಅನುಸಾರ ಅಂಕಗಳ ಆಧಾರದಲ್ಲಿ ನಡೆಸಲಾಗುವುದು. ಕುಸ್ತಿ ಪಟುಗಳಿಗೆ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂಖ್ಯೆ 9964335160 ಅಥವಾ 9036183498 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಈ ವೇಳೆ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಗೌ.ಅಧ್ಯಕ್ಷ ಪಿಳ್ಳಣ್ಣ, ಉಪಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಎಸ್.ಪದ್ಮನಾಭ್, ಖಜಾಂಚಿ ವಿಶ್ವನಾಥ್, ಸಂಘದ ಮುನಿವೆಂಕಟೇಶ್, ಸುಬ್ಬು, ಅರುಣ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

24 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago