ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಗಲಿನ ವೇಳೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಹಾಗೂ ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಪೂರ್ವದಿಂದ ಒತ್ತಡ ಹೆಚ್ಚಿದ್ದರೆ ಕರಾವಳಿ ತೀರದವರೆಗೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ತರ ಒಳನಾಡು ಭಾಗಗಳ ಮಳೆ ಹಾಗೂ ಗಾಳಿಯ ಒತ್ತಡಕ್ಕೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಎಪ್ರಿಲ್ 27ರಿಂದ ಮಳೆ ಹಾಗೂ ವ್ಯಾಪ್ತಿ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಕಳೆದ ಕೆಲವು ದಿನಗಳಿಂದ ನಿರೀಕ್ಷೆ ಮಟ್ಟದ ಮಳೆಯಾಗುತ್ತಿಲ್ಲ). ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಎಪ್ರಿಲ್ 26ರಿಂದ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಸಹ ಅಲ್ಲಲ್ಲಿ ಮಳೆಯಗಬಹುದು.
ದಕ್ಷಿಣ ಒಳನಾಡಿನ ಚಿತ್ರದುರ್ಗ, ಮೈಸೂರು ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡದ ವಾತಾವರಣ ಇರಬಹುದು.
ಈಗಿನಂತೆ ಎಪ್ರಿಲ್ 26 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅನೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ.