26 ಪ್ರಕರಣಗಳನ್ನು ವಾದಿಸಿ ಜಯ‌ ಗಳಿಸಿದ್ದ ನಕಲಿ‌ ವಕೀಲ: ಸದ್ಯ ಪೊಲೀಸರ ವಶದಲ್ಲಿ ನಕಲಿ ವಕೀಲ

ಸುಮಾರು 26 ಪ್ರಕರಣಗಳಲ್ಲಿ ವಾದ ಮಂಡನೆ ಮಾಡಿ ಎಲ್ಲಾ ಪ್ರಕರಣಗಳನ್ನು ಗೆದ್ದಿದ್ದ ಕೀನ್ಯಾದ ಹೈಕೋರ್ಟ್‌ನ ನಕಲಿ ವಕೀಲನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರಂತೆ.

ಬ್ರಿಯಾನ್ ಮ್ವೆಂಡಾ, ನಕಲಿ ವಕೀಲ ಎಂದು‌ ಗುರುತಿಸಲಾಗಿದೆ. ಬಂಧಿತ ನಕಲಿ ವಕೀಲ ಮೆಂಡ್ವಾನನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು‌ ತಿಳಿದುಬಂದಿದೆ.

26 ಪ್ರಕರಣಗಳನ್ನು ಮ್ಯಾಜಿಸ್ಟ್ರೇಟ್‌ಗಳು, ಮೇಲ್ಮನವಿ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಹೈಕೋರ್ಟ್ ನ್ಯಾಯಾಧೀಶರ ಮುಂದೆ ವಾದ ಮಂಡಿಸಿದ್ದ ನಕಲಿ ವಕೀಲ ಮ್ವೆಂಡಾ. ಮ್ವೆಂಡಾ ಎಲ್ಲರ ಮುಂದೆ ನಿಜವಾದ ವಕೀಲನಂತೆ ನಟಿಸುತ್ತಿದ್ದ ಎನ್ನಲಾಗಿದೆ.

ಕೀನ್ಯಾದ ಲಾ ಸೊಸೈಟಿಯ ನೈರೋಬಿ ಶಾಖೆಯ ರಾಪಿಡ್ ಆಕ್ಷನ್ ತಂಡಕ್ಕೆ ಈತನ ವಿಚಾರವಾಗಿ ಸಾರ್ವಜನಿಕ ದೂರುಗಳು ಸಲ್ಲಿಕೆಯಾಗಿದ್ದವು. ನಂತರ, ವಕೀಲ ಎಂದು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದ ಮ್ವೆಂಡಾನನ್ನು ಪೊಲೀಸರು ಕೂಡಲೇ ಬಂಧಿಸಿದ್ದಾರೆ.

ಹೆಚ್ಚಿನ ವಿಚಾರಣೆಗಾಗಿ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ಕೀನ್ಯಾದ ಲಾ ಸೊಸೈಟಿಯ ನೈರೋಬಿ ಬ್ರಾಂಚ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿ ಸ್ಪಷ್ಟಪಡಿಸಿದೆ.

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

5 hours ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

12 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

23 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

1 day ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

1 day ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

1 day ago