
ತುಮಕೂರು :ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿಯೇ ನ್ಯಾಯ ಕೊಡಿಸಬೇಕಾದ ಪೊಲೀಸರು ಸ್ತ್ರೀ ಭಕ್ಷಕರಾಗಿದ್ದಾರೆ. ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ
ಇನ್ನು ಮಹಿಳೆ ಜೊತೆ ಡಿವೈಎಸ್‌ಪಿ ರಾಮಚಂದ್ರಪ್ಪ ಬಲವಂತವಾಗಿ ನಡೆದುಕೊಳ್ಳುತ್ತಿದ್ದುದ್ದನ್ನು ಸೆರೆ ಹಿಡಿದ ವ್ಯಕ್ತಿಯೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.