Categories: Crime

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12 ಕೆ.ಜಿ ಗಾಂಜಾ ವಶ

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12 ಕೆಜಿ ಗಾಂಜಾವನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು 8 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುವ ಘಟನೆ ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಬಂಧಿತ ಆರೋಪಿ ಬೆಂಗಳೂರಿನ ಟಿನ್ ಫ್ಯಾಕ್ಟರಿ ಮೂಲದ ಹನಿಯಪ್ಪನ್ (60) ಎಂದು ತಿಳಿದುಬಂದಿದೆ. ಬಂಧಿತನಿದ್ದ 8 ಲಕ್ಷ ರೂಪಾಯಿ ಮೌಲ್ಯದ 12 ಕೆಜಿ ಗಾಂಜಾ ವಶಪಡಿಸಿಕೊಂಡು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಬಕಾರಿ ಅಧೀಕ್ಷಕರು ಉಪ ವಿಭಾಗ ಚಿಕ್ಕಬಳ್ಳಾಪುರ ಅರುಣ್ ಪ್ರಸಾದ್ ನೇತೃತ್ವದಲ್ಲಿ ತಂಡ ರಚಿಸಿ ಖಚಿತ ಮಾಹಿತಿ ಮೆರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಾಳಿ ವೇಳೆ ಗೌರಿಬಿದನೂರು ಅಬಕಾರಿ ನಿರೀಕ್ಷಕರಾದ ಮಂಜುನಾಥ್, ಹಾಗೂ ಅಶ್ವಿನಿ ಬೆಳ್ಳೂರ್, ಉಪ ವಿಭಾಗದ ವಿನೋದ್ ಡಿಎಲ್, ಹಿಂದೂಪುರ ಆರ್‌ಪಿಎಫ್ ಅಧಿಕಾರಿಯಾದ ಸಾಯಿನಾಥ ರೆಡ್ಡಿ, ಹಾಗೂ ಪೇದೆಗಳಾದ ರವಿ ಪ್ರಸಾದ್, ಹರೀಶ್, ಗೃಹರಕ್ಷಕ ಸಿಬ್ಬಂದಿ ರಾಜಣ್ಣ ಮತ್ತು ಕಾಂತರಾಜ್ ಇದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

11 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

15 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

19 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago