ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದ್ದರೂ ತೀವ್ರತೆ ಸ್ವಲ್ಪ ಕಡಿಮೆಯಾಗಲಿದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮೇ 28 ರಿಂದ ಮತ್ತೆ ಮಳೆ ಚುರುಕಾಗುವ ಲಕ್ಷಣಗಳಿದ್ದು, ಜೂನ್ 3ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲೂ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆ ಇದ್ದರೂ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 28ರಿಂದ ಮುಂಗಾರು ಮತ್ತೆ ಚುರುಕಾದರೂ ಜೂನ್ 1ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾವೇರಿ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮೈಸೂರು ಜಿಲ್ಲೆಯ ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 28ರಿಂದ 2 ದಿವಸಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ ಇದ್ದು, ನಂತರ ಬಿಸಿಲಿನ ಅವಧಿ ಹೆಚ್ಚಿರಬಹುದು.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ 4 ದಿನಗಳಲ್ಲಿ ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. ಜೂನ್ ಮೊದಲವಾರದಲ್ಲಿ ರಾಜ್ಯದಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.