ಮಹಾರಾಷ್ಟ್ರದಲ್ಲಿ ಕನ್ನಡದ ವಾಹನಗಳ ಮೇಲೆ ಎಂಇಎಸ್ ಪುಂಡಾಟಿಕೆ ವಿಚಾರ: ಮಹಾರಾಷ್ಟ್ರದವರಿಗೆ ಗುಲಾಬಿ ಕೊಟ್ಟು, ಸಿಹಿ ಹಂಚಿ‌ ಗೌರವಯುತವಾಗಿ ನಡೆಸಿಕೊಂಡ ಕರವೇ ರಾಜಘಟ್ಟ ರವಿ ನೇತೃತ್ವದ ತಂಡ

ಮರಾಠಿ ಮಾತನಾಡದ ಕರ್ನಾಟಕದ ಬಸ್‌ ಕಂಡಕ್ಟರ್‌ ಮೇಲಿನ ದಾಳಿ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)‌ಯ ಪುಂಡಾಟಿಕೆ ವಿರುದ್ಧ ಕನ್ನಡ ಶಕ್ತಿಗಳು ಒಂದಾಗಿವೆ. ಭಾಷಾಗ್ನಿಯ ಕುಂಡವಾಗಿ ಮಾರ್ಪಟ್ಟಿರುವ ಬೆಳಗಾವಿಗೆ ಈಗಾಗಲೇ ಕನ್ನಡಪರ ಸಂಘಟನೆಗಳ ನಾಯಕರು ಕಾಲಿಟ್ಟಿದ್ದು, ಎಂಇಎಸ್‌ ಮರಾಠಿ ಪುಂಡರ ಗುಂಪಿನ ದೌರ್ಜನ್ಯವನ್ನು ಅಂತ್ಯಗೊಳಿಸುವ ಶಪಥ ಮಾಡಿದ್ದಾರೆ.

ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜಘಟ್ಟ ರವಿ ನೇತೃತ್ವದ ತಂಡ ಇಂದು ದೇವನಹಳ್ಳಿ-ದೊಡ್ಡಬಳ್ಳಾಪುರ ನಡುವೆ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಬಹಳ ಶಾಂತಿಯುತವಾಗಿ ಮಹಾರಾಷ್ಟ್ರದ ವಾಹನಗಳನ್ನು ನಿಲ್ಲಿಸಿ ವಾಹನ ಚಾಲಕರಿಗೆ ಗುಲಾಬಿ ಹೂ ಹಾಗೂ ಸಿಹಿ ಕೊಟ್ಟು ಸನ್ನಡತೆಯಿಂದ ನಡೆಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿನ ಎಂಇಎಸ್ ಪುಂಡರಿಗೆ ನಿಮ್ಮ ವಾಹನಗಳು ನಮ್ಮಲ್ಲಿಗೆ ಬರುತ್ತೆ ಅಂತ ಎಚ್ಚರಿಕೆ‌ಯನ್ನು ನೀಡಿದ್ದಾರೆ. ನಮ್ಮ ಸನ್ನಡತೆಯನ್ನು ಮಹಾರಾಷ್ಟ್ರದಲ್ಲಿನ ಎಂಇಎಸ್ ಅವರಿಗೆ ತಿಳಿಸುವಂತೆ ಸೂಚನೆ ನೀಡಿದ್ದಾರೆ.

ಈ ವೇಳೆ ಕರವೇ ಮುಖಂಡ ರಾಜಘಟ್ಟ ರವಿ ಮಾತನಾಡಿ, ಹಿಂಸೆಯಿಂದ ಏನನ್ನು ಸಾಧಿಸುವುದಕ್ಕೆ ಆಗೋದಿಲ್ಲ. ನಾವು ಅವರ ರೀತಿ ಕಾನೂನಿನ ಎಲ್ಲೆ ಮೀರುವುದಿಲ್ಲ. ಮಹಾರಾಷ್ಟ್ರದವರಿಗೆ ಹೂ, ಸಿಹಿ ಹಂಚಿ ಗೌರವ ಕೊಟ್ಟು ಸುರಕ್ಷಿತವಾಗಿ ಕಳುಹಿಸಿಕೊಡುತ್ತಿದ್ದೇವೆ. ಇದು ನಮ್ಮ ಕರ್ನಾಟಕ ಜನತೆಯ ಒಳ್ಳೇತನ. ನಮ್ಮ ಹೋರಾಟ ಏನಿದ್ದರು ಎಂಇಎಸ್‌ ಮರಾಠಿ ಪುಂಡರ ವಿರುದ್ಧ, ನಮ್ಮ ಆಕ್ರೋಶ ಕನ್ನಡ ವಿರೋಧಿಗಳ ಮೇಲೆ, ಶಿವಸೇನೆ ಪುಂಡರ ಮೇಲೆ ಹೊರೆತು ಅಲ್ಲಿನ ಅಮಾಯಕರ ಮೇಲೆ ಅಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

5 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

15 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago