ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೂರನೇ ಕ್ರಾಸ್ ಪ್ರಿಯದರ್ಶಿನಿ ಬಡಾವಣೆಯಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದಾಗಿ ಚರಂಡಿ ನೀರು ರಸ್ತೆಯಲ್ಲಿ ನಿಂತ್ತಿದ್ದು, ಬಡವಾಣೆಯ ನಿವಾಸಿಗಳು ಓಡಾಡಲು ಪರದಾಡುವಂತಾಗಿದೆ.
ಕಳೆದು ಒಂದು ತಿಂಗಳ ಹಿಂದೆ ಚರಂಡಿ ಕಾಮಗಾರಿಯನ್ನು ನಡೆಸಲಾಗಿತ್ತು. ಚರಂಡಿ ನೀರು ಹಾಗೂ ಮಳೆ ನೀರು ಸರಾಗವಾಗಿ ಹರಿದು ಹೋಗಲು ಆಗದೇ ರಸ್ತೆ ಮೇಲೆ ಬಂದು ಅವಾಂತರ ಸೃಷ್ಟಿಸಿದೆ.
ಬಿಟ್ಟೂಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಬಡಾವಣೆಗೆ ಪ್ರವೇಶಿಸುವ ಸ್ಥಳದಲ್ಲೇ ನೀರು ತುಂಬಿಕೊಂಡಿದೆ. ಶಾಲಾ ಮಕ್ಕಳು, ವೃದ್ಧರು, ವಾಹನ ಸವಾರರು ಓಡಾಡಲು ಆಗದೇ ಪರಿತಪಿಸುವಂತಾಗಿದೆ.
ಈ ಕುರಿತು ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಬೇಜವಾಬ್ದಾರಿ ಮೆರೆಯುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ.