ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ.
ಚನ್ನಪಟ್ಟಣದಲ್ಲಿ 14ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಗೆಲುವಿನ ಸನಿಹದತ್ತ ಸಿಪಿವೈ ಇದ್ದಾರೆ. ನಿರಂತರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನೂ ಕೇವಲ 6 ಸುತ್ತುಗಳ ಮಾತ್ರ ಎಣಿಕಾ ಕಾರ್ಯ ಬಾಕಿ ಇದೆ. ಈಗಾಗಲೇ 1 ಲಕ್ಷದ 50 ಸಾವಿರ ಮತಗಳ ಎಣಿಕಾ ಕಾರ್ಯ ಪೂರ್ಣವಾಗಿದೆ. ಉಳಿದ 50600 ಮತಗಳ ಎಣಿಕೆ ಬಾಕಿ ಇದೆ.
ಸಂಡೂರಿನಲ್ಲಿ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ 8,881 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಸಂಡೂರಿನಲ್ಲಿ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ 8,881 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆಯ 11ನೇ ಸುತ್ತು ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ್ ಭಾರೀ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ 12,793 ಮತಗಳ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾ್ 68,078 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ: 55,285 ಮತಗಳನ್ನು ಪಡೆದಿದ್ದಾರೆ.