3 ಸಾವಿರ ವಿದ್ಯಾರ್ಥಿಗಳಿಂದ ಪ್ರಜಾತಂತ್ರ ರಕ್ಷಣೆ ಸಂಕಲ್ಪ

ದೊಡ್ಡಬಳ್ಳಾಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ 3 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡು ಪ್ರಜಾಪ್ರಭುತ್ವ ರಕ್ಷಣೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ವಿದ್ಯಾರ್ಥಿನಿಲಯ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳು ಮಾನವ ಸರಪಳಿ ರಚಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣೆಯ ಸಂಕಲ್ಪ ಮಾಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಇಂದು ಜಾಗತಿಕ ಮಟ್ಟದಲ್ಲಿ ಸದೃಢ ಹಾಗೂ ಸೌಹಾರ್ದಯುತ ಸಮಾನ ನಿರ್ಮಾಣಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಅಡಿಗಲ್ಲಾಗಿದ್ದು, ಭಾರತ ಪ್ರಜಾಪ್ರಭುತ್ವದ ತಾಯಿ ಎನಿಸಿದೆ. ಜಗತ್ತಿನ ಅತಿದೊಡ್ಡ ಪ್ರಜಾತಂತ್ರ ವ್ಯವಸ್ಥೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಅನನ್ಯತೆಯನ್ನು ಉಳಿಸಿಕೊಂಡಿದೆ ಎಂದರು.

ಪ್ರಾಧ್ಯಾಪಕ ರವಿಕಿರಣ್, ಸಂವಿಧಾನ ಪೀಠಿಕೆ ಹಾಗೂ ಪ್ರಜಾಪ್ರಭುತ್ವ ರಕ್ಷಣೆಯ ಸಂಕಲ್ಪ ವಿಧಿಯನ್ನು ಬೋಧಿಸಿದರು.

ಮಾನವ ಸಂಪನ್ಮೂಲ ಅಧಿಕಾರಿ ಬಾಬುರೆಡ್ಡಿ, ಶೈಕ್ಷಣಿಕ ಘಟಕಗಳ ಮುಖ್ಯಸ್ಥರಾದ ವಿಜಯ್‌ಕಾರ್ತಿಕ್, ನಾಗರಾಜ್, ಮಹಂತೇಶಪ್ಪ, ಚಿಕ್ಕಣ್ಣ, ನರಸಿಂಹರೆಡ್ಡಿ, ರವಿಕುಮಾರ್, ಧನಂಜಯ್, ಜಿಯಾವುಲ್ಲಾ, ಎಇಇ ರಮೇಶ್‌ಕುಮಾರ್, ವಾರ್ಡನ್‌ ಶಂಕರ್‌, ದೈಹಿಕ ಶಿಕ್ಷಣ ನಿರ್ದೇಶಕ ದಾದಾಫೀರ್, ವಾಹನ ಉಸ್ತುವಾರಿ ವಿಶ್ವನಾಥ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಬಳಿಕ, ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿ, ತಾಲೂಕಿನ ತುಮಕೂರು ರಾಷ್ಟ್ರೀಯ ಹೆದ್ದಾರಿಯ ಮೆಷ್ಟ್ರುಮನೆ ಕ್ರಾಸ್‌ನಿಂದ ಕೊಡಿಗೇಹಳ್ಳಿ ಮಾರ್ಗವಾಗಿ ಕುರುಬರಹಳ್ಳಿಯವರೆಗೆ ಸುಮಾರು 3 ಕಿ.ಮೀ ಉದ್ದದ ಮಾನವ ಸರಪಳಿ ರಚಿಸಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾದರು.

Ramesh Babu

Journalist

Recent Posts

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

2 hours ago

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

11 hours ago

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

21 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

22 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

24 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

1 day ago