30ದಿನಗಳ ಅವಧಿಯ ಟೈಲರಿಂಗ್ ಉಚಿತ ತರಬೇತಿ ಶಿಬಿರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ ಕಾಲಾವಧಿಯ ಟೈಲರಿಂಗ್ ಉಚಿತ  ತರಬೇತಿ  ಶಿಬಿರ ಹಮ್ಮಿಕೊಳ್ಳಲಾಗಿದೆ.

ಆಸಕ್ತ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 2023  ಸೆಪ್ಟೆಂಬರ್ 29 ಶುಕ್ರವಾರದಂದು  ಸಂಸ್ಥೆಯಲ್ಲಿ ನಡೆಯುವ  ತರಬೇತಿಯಲ್ಲಿ ನೇರವಾಗಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಿ ತಮ್ಮ ಹೆಸರನ್ನು ನೊಂದಾಯಿಸಕೊಳ್ಳಬಹುದು.

ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.

ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644 9535774621 ಸಂಪರ್ಕಿಸಬಹುದಾಗಿದೆ.

ಆಸಕ್ತರು ಗೂಗಲ್ ಫಾರ್ಮ್ ಮೂಲಕ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಅದರ ಲಿಂಕ್,

 https://docs.google.com/forms/d/1xDvF4Tozn-HlRBRbikHKVudJGDkFPiBb2Y0jS996Cus/edit?chromeless=1

Leave a Reply

Your email address will not be published. Required fields are marked *