ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ ಕಾಲಾವಧಿಯ ಟೈಲರಿಂಗ್ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 2023 ಸೆಪ್ಟೆಂಬರ್ 29 ಶುಕ್ರವಾರದಂದು ಸಂಸ್ಥೆಯಲ್ಲಿ ನಡೆಯುವ ತರಬೇತಿಯಲ್ಲಿ ನೇರವಾಗಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಿ ತಮ್ಮ ಹೆಸರನ್ನು ನೊಂದಾಯಿಸಕೊಳ್ಳಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644 9535774621 ಸಂಪರ್ಕಿಸಬಹುದಾಗಿದೆ.
ಆಸಕ್ತರು ಗೂಗಲ್ ಫಾರ್ಮ್ ಮೂಲಕ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಅದರ ಲಿಂಕ್,
https://docs.google.com/forms/d/1xDvF4Tozn-HlRBRbikHKVudJGDkFPiBb2Y0jS996Cus/edit?chromeless=1
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…
ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆರ್ಥಿಕ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…