ಸುಮಾರು 30 ಸಾವಿರ ಪ್ರೇಕ್ಷಕರ ಸಾಮರ್ಥ್ಯ ಹೊಂದಿರುವ ವಾರಣಾಸಿಯಲ್ಲಿರುವ ನೂತನ ಕ್ರಿಕೆಟ್ ಕ್ರೀಡಾಂಗಣಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಈ ಕ್ರೀಡಾಂಗಣವು 30ಕ್ಕೂ ಹೆಚ್ಚು ಎಕರೆಯಲ್ಲಿ 330 ಕೋಟಿ ರೂ. ವೆಚ್ಚದಲ್ಲಿ ಡಿಸೆಂಬರ್ 2025ರೊಳಗಾಗಿ ಸಿದ್ಧವಾಗುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಈ ವೇಳೆ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಮತ್ತು ರವಿಶಾಸ್ತ್ರಿ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಕಾರ್ಯದರ್ಶಿ ಜಯ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಉಪಸ್ಥಿತರಿದ್ದರು.