ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 30ರ ತನಕ ಉತ್ತರ ಕನ್ನಡ ಸಾಮಾನ್ಯ ಹಾಗೂ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಮೇ 31ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 1ರಿಂದ ಮಳೆ ಮತ್ತಷ್ಟು ಕ್ಷೀಣಿಸುವ ಸಾಧ್ಯತೆಗಳಿದ್ದು, ಜೂನ್ 4ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 30ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೇ 31ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.
ಒಳನಾಡು : ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ ಮಳೆ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಂಗ್ಲಾದೇಶದ ಕರಾವಳಿ ಮೂಲಕ ಭೂ ಪ್ರವೇಶಿಸಿದ್ದು, ಅಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ಮಾರುತಗಳು ದುರ್ಬಲವಾಗುವ ಸಾಧ್ಯತೆ ಕಾಣಿಸುತ್ತಿದೆ.
ಮುಂದಿನ 2 ದಿವಸಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಜೊತೆಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…