31ಅಡಿ ಎತ್ತರದ ದೇವರಬೆಟ್ಟ ಶ್ರೀ ವಿಶ್ವ ಶನೇಶ್ವರ ಸ್ವಾಮಿಯ 21ನೇ ವರ್ಷದ ವಾರ್ಷಿಕೋತ್ಸವ: ಅದ್ದೂರಿಯಾಗಿ ನಡೆದ ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆ

ದೊಡ್ಡಬಳ್ಳಾಪುರ ತಾಲೂಕಿನ ಎಸ್ ಎಸ್ ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಮೀಪವಿರುವ ಬಂಡೇಪಾಳ್ಯದಲ್ಲಿರುವ 31ಅಡಿ ಎತ್ತರವಿರುವ ದೇವರಬೆಟ್ಟ ಶ್ರೀ ವಿಶ್ವ ಶನೇಶ್ವರ ಸ್ವಾಮಿಯ 21ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆ ಕಾರ್ಯಕ್ರಮಗಳು ಭಕ್ತರ ಸಮ್ಮಖದಲ್ಲಿ ಬಹಳ ಸಂಭ್ರಮ‌ ಸಡಗರದಿಂದ ನೆರವೇರಿದವು.

ಶನೇಶ್ವರ ಸ್ವಾಮಿ, ಬನಶಂಕರಿ, ಪಂಚಮುಖಿ ಗಣಪತಿ, ಆಂಜನೇಯಸ್ವಾಮಿ, ಆದಿತ್ಯಾದಿ ನವಗ್ರಹಗಳಿಗೆ ಮೇ.26ರಿಂದ ಜೂ.1ರವರೆಗೆ ವಿವಿಧ ಪೂಜಾವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆ ಹಿನ್ನೆಲೆ ದೇವಾಲಯದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ನಾನಾ ಭಾಗಗಳಿಂದ‌ ಭಕ್ತರ ದಂಡೇ ಹರಿದುಬಂದು ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆಯನ್ನು ಕಣ್ತುಂಬಿಕೊಂಡು ದೇವರ ಕೃಪೆಗೆ ಪಾತ್ರರಾದರು.

Ramesh Babu

Journalist

Recent Posts

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

3 hours ago

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

17 hours ago

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

21 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

22 hours ago