ಬೆಂಗಳೂರು: ರಾಜ್ಯಾದ್ಯಂತ 33 ಡಿವೈಎಸ್ಪಿ ಮತ್ತು 132 ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮುನಿಕೃಷ್ಣ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಹರೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಮುನಿಕೃಷ್ಣ ಅವರ ಜಾಗಕ್ಕೆ ಸಿಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾದಿಕ್ ಪಾಷಾ ಹಾಗೂ ಹರೀಶ್ ಅವರ ಜಾಗಕ್ಕೆ ರಾಜ್ಯ ಗುಪ್ತಚರ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದೊಡ್ಡಪ್ಪ ಅವರನ್ನು ನೇಮಿಸಲಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ಮುಂದಾಗಿದೆ. ಅದೇ ರೀತಿ 33 ಡಿಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ.