Categories: ವೈರಲ್

34 ವರ್ಷದ ಮಹಿಳೆಗೆ ತಾಳಿ‌ಕಟ್ಟಿದ 80 ವರ್ಷದ ಅಜ್ಜ

34 ವರ್ಷದ ಮಹಿಳೆ 80ವರ್ಷದ ಅಜ್ಜನಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗುತ್ತಾರೆ. ಈ ಪರಿಚಯ ಮದುವೆಯಾಗುವ ಮಟ್ಟಕ್ಕೆ ಹೋಗುತ್ತದೆ.

ಮಧ್ಯಪ್ರದೇಶದ ಅಗರ್ ಜಿಲ್ಲೆಯ ಸುಸ್ನೇರ್ ತಹಸಿಲ್ ಬಳಿಯ ಮಗರಿಯಾ ಗ್ರಾಮದ ಬಲುರಾಮ್ ಬಗ್ರಿ ಅವರು ಮಹಾರಾಷ್ಟ್ರದ ಅಮರಾವತಿಯ ಶೀಲಾ ಅವರನ್ನು ತಮ್ಮ ಕುಟುಂಬ ಮತ್ತು ಸ್ನೇಹಿತರ ಸಮ್ಮುಖದಲ್ಲಿ ಸುಸ್ನರ್ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ.

ಸಾಲದ ಸುಳಿಯಲ್ಲಿ ಸಿಲುಕಿ ಕೆಲ ವರ್ಷಗಳ ಹಿಂದೆ ಬಲುರಾಮ್ ಅವರ ಪತ್ನಿ ತೀರಿಕೊಂಡಿದ್ದರು. ಜೀವನದ ಹೋರಾಟಗಳನ್ನು ನಿಭಾಯಿಸಲು ಪ್ರಯತ್ನಿಸುತ್ತಿರುವಾಗ, ಅವರು ಖಿನ್ನತೆಗೆ ಒಳಗಾದರು.

ಈ ಸಮಯದಲ್ಲಿ, ವಿಷ್ಣು ಬಲುರಾಮ್ ಅವರು ತಮಾಷೆಯ ರೀಲ್ಸ್ ಗಳನ್ನು ಮಾಡಲು ಪ್ರಾರಂಭಿಸಿ, ಅವುಗಳನ್ನು ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಳ್ಳುತ್ತಿದ್ದರು. ಬಲುರಾಮ್ ಅವರ ರೀಲ್ಸ್ ಗಳು ವೈರಲ್ ಆಗುತ್ತಿತ್ತು.

46 ವರ್ಷ ವಯಸ್ಸಿನ ಅಂತರವಿರುವ ಶೀಲಾ ಅವರು ವಿಷ್ಣು ಬಲುರಾಮ್ ಅವರನ್ನು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಿ ಚಾಟ್ ಮಾಡಲು ಪ್ರಾರಂಭಿಸಿದರು.

ಶೀಲಾ ಮತ್ತು ಬಾಲುರಾಮ್ ಅವರ ಸ್ನೇಹ ಪ್ರೀತಿಗೆ ತಿರುಗಿತು. ಶೀಲಾ ಸುಸ್ನರ್‌ಗೆ ಪ್ರಯಾಣ ಬೆಳೆಸಿ ಸೋಮವಾರ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

16 minutes ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

3 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

4 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

4 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

8 hours ago