ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ.13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ.
ಫಾಕ್ಸ್‌ಕಾನ್ ಈಗಾಗಲೇ ರಾಜ್ಯದಲ್ಲಿ ರೂ. 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (ರೂ 3237.30 ಕೋಟಿ ), ಟಿಆರ್‌ಐಎಲ್ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್ ಲಿಮಿಟೆಡ್ (ರೂ 607 ಕೋಟಿ ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ’ಎಸ್‌ಎಚ್‌ಎಲ್‌ಸಿಸಿ’ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ.
“ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು ರೂ. 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3,538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ‘ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ”.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…