35ರ ಯುವತಿಗೆ ತಾಳಿಕಟ್ಟಿದ 75ರ ವೃದ್ಧ

ವರನಿಗೆ 75 ವರ್ಷ, ವಧುವಿಗೆ 35 ವರ್ಷ‌ ವಯಸ್ಸು ಅಷ್ಟೇ. ವಯಸ್ಸಿನ ಎಲ್ಲೇ ಮೀರಿ 35 ವರ್ಷದ ಯುವತಿಯನ್ನ ವರಸಿದ 75ರ ವೃದ್ಧ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದಲ್ಲಿ ನಡೆದಿದೆ.

ಮೇಲೂರು ಗ್ರಾಮದ 75 ವರ್ಷದ ಈರಣ್ಣ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ 35 ವರ್ಷದ ಅನುಶ್ರೀ ಅವರನ್ನ ಅಪ್ಪೇಗೌಡನಹಳ್ಳಿ ಗೇಟ್ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈರಣ್ಣನಿಗೆ ಈ ಮೊದಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆತನ ಪತ್ನಿ ಮೃತಪಟ್ಟು ಐದಾರು ವರ್ಷಗಳೇ ಕಳೆದಿವೆ. ಈತನ ಮಗ-ಮಗಳು ಯಾರೂ ಈರಣ್ಣನನ್ನು ನೋಡಿಕೊಳ್ಳುತ್ತಿರಲಿಲ್ಲ. ಮತ್ತೊಂದಡೆ ಈರಣ್ಣನಿಗೆ ಹೃದಯ ಸಮಸ್ಯೆ, ಬಿಪಿ, ಶುಗರ್ ಇದೆಯಂತೆ. ಲಾಲನೆ, ಪಾಲನೆ, ಪೋಷಣೆಗೋಸ್ಕರವಾದರೂ ಮತ್ತೊಂದು ಮದುವೆಯಾಗುವ ಆಸೆ ವ್ಯಕ್ತಪಡಿಸಿದ್ದ ಈರಣ್ಣ.

ಇನ್ನೊಂದಡೆ ತಂದೆ, ತಾಯಿ, ಬಂಧು-ಬಳಗ ಇಲ್ಲದೇ ಅನುಶ್ರೀ ಎಂಬ ಮಹಿಳೆ ಒಂಟಿಯಾಗಿದ್ದಳು. ಪ್ರೀತಿಸಿ ಮದುವೆಯಾಗಿದ್ದ ಗಂಡ ಆಕೆಯನ್ನು ತೊರೆದಿದ್ದಾನೆ. 6 ವರ್ಷದ ಮಗನಿರುವ ಅನುಶ್ರೀ ಈಗ ಈರಣ್ಣನನ್ನು ಮದುವೆ ಮಾಡಿಕೊಂಡು ಹೊಸ ಬಾಳಿನ ಕನಸ್ಸನ್ನು ಕಂಡಿದ್ದಾಳೆ.

ಇಲ್ಲಿ ವಯಸ್ಸು ಮುಖ್ಯ ಅಲ್ಲ, ಒಬ್ಬರಿಗೊಬ್ಬರ ಆಸರೆ ಅತಿಮುಖ್ಯ. ಈ ಹಿನ್ನೆಲೆ ತಮ್ಮ ವಯಸ್ಸನ್ನ ಬದಿಗೊತ್ತಿ ಮದುವೆಯಾಗಿರುವ ಈರಣ್ಣ ಹಾಗೂ ಅನುಶ್ರೀ.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

6 minutes ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

31 minutes ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

2 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

8 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

22 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago