35 ವರ್ಷಗಳ ಬಳಿಕ ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಶಿರಸಿ: ಸುಮಾರು 35 ವರ್ಷಗಳಿಂದ ಹಳೆಯ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಶಿರಸಿ ಪೊಲೀಸರು ದೆಹಲಿಯಲ್ಲಿ ಪತ್ತೆ ಹಚ್ಚಿ, ದಾಂಡೇಲಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

1990ರ ನವೆಂಬರ್ 29 ರಂದು ಶಿರಸಿಯ ಐದು ರಸ್ತೆಯ ಬಳಿ ದಿನಕರ್ ನಾರಾಯಣ ಶೆಟ್ಟಿ ಎಂಬುವವರಿಗೆ ದೀಪಕ್ ವಿಠಲ್ ಭಂಡಾರಿ ಎಂಬಾತ ಹಲ್ಲೆ ಮಾಡಿ ಗಾಯಗೊಳಿಸಿದ್ದ. ಈ ಸಂಬಂಧ ನಾರಾಯಣ ನಾಗಪ್ಪ ಶೆಟ್ಟಿ ಅವರು ನೀಡಿದ ದೂರಿನ ಮೇರೆಗೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಪ್ರಕರಣ ದಾಖಲಾದಾಗಿನಿಂದಲೂ ಆರೋಪಿ ದೀಪಕ್ ಭಂಡಾರಿ ನಾಪತ್ತೆಯಾಗಿದ್ದ. ಕಳೆದ 35 ವರ್ಷಗಳಿಂದ ಆತ ಪೊಲೀಸರಿಗೂ ಅಥವಾ ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಆರೋಪಿ ದೀಪಕ್ ಭಂಡಾರಿಗಾಗಿ ಹುಬ್ಬಳ್ಳಿ, ಮಂಗಳೂರು, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇಂತಹ ಕ್ಲಿಷ್ಟಕರ ಪ್ರಕರಣವನ್ನು ಭೇದಿಸಲು ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡಕ್ಕೆ ಆರೋಪಿಯು ಪ್ರಸ್ತುತ ನವದೆಹಲಿಯಲ್ಲಿ ವಾಸವಾಗಿದ್ದು, ದಾಂಡೇಲಿಗೆ ಬರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು.

ಮಾಹಿತಿಯನ್ನಾಧರಿಸಿ ಕಾರ್ಯಪ್ರವೃತ್ತರಾದ ಪೊಲೀಸರು, ದಿನಾಂಕ 25-08-2025 ರಂದು ದಾಂಡೇಲಿಯಲ್ಲಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಯಶಸ್ವಿ ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕೃಷ್ಣಮೂರ್ತಿ ಜಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಜಗದೀಶ ನಾಯ್ಕ, ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ್ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದೆ.

ಶಿರಸಿ ನಗರ ಠಾಣೆಯ ಪಿಎಸ್‌ಐಗಳಾದ ನಾಗಪ್ಪ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ನಾರಾಯಣ ಆರ್. ರಾಠೋಡ್ (ತನಿಖೆ) ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹನುಮಂತ ಕಬಾಡಿ, ತುಕಾರಾಮ ಬಣಕಾರ, ರಾಮಯ್ಯ ಪೂಜಾರಿ, ಸದ್ದಾಂ ಹಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ಹನುಮಂತ ಮಾಕಾಪುರ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಉದಯ ಗುನಗಾ ಮತ್ತು ಬಬನ್ ಕದಂ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

45 minutes ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

12 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

16 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

19 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

22 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago