Categories: ಕೋಲಾರ

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್ – ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಡ್ರಗ್ ಕಂಟ್ರೋಲರ್.!

ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.‌ 35,000 ಸಾವಿರ ಲಂಚ ಸ್ವೀಕಾರ ಮಾಡಿ ಲೋಕಾ ಅಧಿಕಾರಿಗಳ ಕಂಡ ಕೂಡಲೇ ಪರಾರಿಯಾಗಿದ್ದರು.

ಮಾರ್ಗಮಧ್ಯದಲ್ಲೇ ಲಂಚದ ಹಣವನ್ನು ಬಿಸಾಡಿ ಬಂದಿದ್ದರು. ತಡರಾತ್ರಿವರಗೂ ಹಣಕ್ಕಾಗಿ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಹುಡುಕಾಡಿದ್ರೂ ಹಣ ಸಿಗಲಿಲ್ಲ.‌

ಹೀಗಾಗಿ ಹಣ ಸ್ವೀಕರಿಸಿರುವ ವಿಡಿಯೋ ಆಧಾರದ ಮೇಲೆ ಎಫ್ ಡಿಸಿ- ಶ್ಯಾಮಲಾ, ನಿವೃತ್ತ ಡಿ ಗ್ರೂಪ್ ನೌಕರ ಶ್ರೀನಿವಾಸ್, ಹಾಗೂ ಡ್ರೈವರ್ ಮಹಂತೇಶ್ ಸದ್ಯ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೀತು. ದಲಿತ ಮುಖಂಡ ಹೂಹಳ್ಳಿ ಪ್ರಕಾಶ್ ಹಾಗೂ ಕೃಷ್ಣಯ್ಯ ಎಂಬುವರು ದೂರು ನೀಡಿದ್ರು.

Ramesh Babu

Journalist

Recent Posts

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

2 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

3 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

15 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

15 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

16 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 day ago