ಟೋಕಿಯೊದ ಹನೆಡಾ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್‌ಲೈನ್ಸ್ ವಿಮಾನವೊಂದು ರನ್‌ವೇಯಲ್ಲಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ.
ವಿಮಾನದಲ್ಲಿ 350ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆದ ನಂತರ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸ್ಥಳೀಯ ಮಾಧ್ಯಮಗಳ ಪ್ರಕಾರ, ವಿಮಾನದಲ್ಲಿದ್ದ ಎಲ್ಲ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇಂತಹ ಸಂದರ್ಭದಲ್ಲಿ ಭಾರೀ ಅನಾಹುತ ತಪ್ಪಿದೆ. ಸದ್ಯ ವಿಮಾನದ ಬೆಂಕಿಯನ್ನು ನಂದಿಸುವ ಪ್ರಯತ್ನ ನಡೆಸಲಾಗಿದೆ.