ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಎಣಿಕೆ: 65,65,445 ಕಾಣಿಕೆ ಸಂಗ್ರಹ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಇಂದು(ಶುಕ್ರವಾರ) ಹುಂಡಿ ಕಾಣಿಕೆ ಎಣಿಕೆ ಮಾಡಲಾಯಿತು.

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಶುಕ್ರವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.65,65,445 ಹಣ ಸಂಗ್ರಹವಾಗಿದೆ.

ಇದರೊಂದಿಗೆ 73,600 ರೂ ಮೌಲ್ಯದ 01 ಕೆಜಿ ಬೆಳ್ಳಿ, 2,800 ರೂ ಮೌಲ್ಯದ 700 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.

ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.

ಹುಂಡಿ ಕಾಣಿಕೆ ಎಣಿಕೆ ಕಾರ್ಯದಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ  ಪಿ. ದಿನೇಶ್‍, ಉಪ ಕಾರ್ಯದರ್ಶಿ ಎಂ. ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಸಿಲ್ದಾರ್ ಜಿ.ಜೆ. ಹೇಮಾವತಿ, ಪ್ರಧಾನ ಅರ್ಚಕ ಶ್ರೀನಿಧಿ, ಪ್ರಾಧಿಕಾರದ ಸದಸ್ಯರಾದ ಜೆ.ಎನ್ .ರಂಗಪ್ಪ, ಎಸ್ .ರವಿ, ಲಕ್ಷ್ಮ ನಾಯಕ್, ಆರ್. ವಿ ಮಹೇಶ್ ಕುಮಾರ್, ಹೇಮಲತಾ ರಮೇಶ್, ಪೋಲಿಸ್ ಸಿಬ್ಬಂದಿ ದೇವಾಲಯದ ಸಿಬ್ಬಂದಿ, ಇಂಡಿಯಾನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

14 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

19 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

22 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

2 days ago