ಲೋಕಾಯುಕ್ತ ಸಂಸ್ಥೆಯಲ್ಲಿ ಎಸಿ, ತಹಶೀಲ್ದಾರ್ ಗಳ ಮೇಲೆ ಸ್ವಯಂಪ್ರೇರಿತ ದೂರು ದಾಖಲು

ಜಿಲ್ಲೆಯ ಸೈನಿಕರು, ಮಾಜಿ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರಿರಿಗೆ ಹಾಗೂ ಅವಲಂಬಿತ ಕುಟುಂಬಗಳಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಲು ವಿಳಂಬ ಧೋರಣೆ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲೆಯ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಗಳ ಮೇಲೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಉಪವಿಭಾಗಾಧಿಕಾರಿ ದುರ್ಗ ಶ್ರೀ, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಎಂ, ಹೊಸಕೋಟೆ ತಹಶೀಲ್ದಾರ್ ಸೋಮಶೇಖರ್ ಕೆ.ಎಸ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ನೆಲಮಂಗಲ ತಹಶೀಲ್ದಾರ್ ಶೀಥಲ್ ವಿ.ಎಸ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಜಿಲ್ಲೆಯಲ್ಲಿ ನಿವೃತ್ತರಾದ ಯೋಧರಿಗೆ ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನಿಗದಿತ ಸಮಯದಲ್ಲಿ ನೀಡದೆ ಸರ್ಕಾರಿ/ಸಾರ್ವಜನಿಕ ನೌಕರ/ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿರುವುದು ಹಾಗೂ ಕರ್ತವ್ಯಲೋಪ ಎಸಗುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು ದೂರಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಇರುವುದರಿಂದ ಈ ಬಗ್ಗೆ ಕೂಲಂಕುಷವಾದ ತನಿಖೆಯ ಅವಶ್ಯಕತೆ ಇದೆ ಎಂದು ಲೋಕಾಯುಕ್ತ ಸಂಸ್ಥೆ ತಿಳಿಸಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

6 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

7 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

8 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

12 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

13 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

13 hours ago