ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಅಡ್ಡವಾಗಿ ಬ್ಯಾನರ್ ಅಳವಡಿಕೆ ಆರೋಪ: ಪ್ರಬುದ್ಧ ಕರ್ನಾಟಕ ಭೀಮ ಸೇನೆ ಖಂಡನೆ

ದೊಡ್ಡಬಳ್ಳಾಪುರ : ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಅಡ್ಡವಾಗಿ ಬ್ಯಾನರ್ ಕಟ್ಟಿ ರಾಷ್ಟ್ರ ನಾಯಕರಿಗೆ ಅವಮಾನ ಮಾಡಿದ್ದಾರೆ, ಮಹಾನ್ ನಾಯಕರಿಗೆ ಅಗೌರವ ತೋರಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಆಗ್ರಹಿಸಿದೆ.

ದೊಡ್ಡಬಳ್ಳಾಪುರ ಹಳೇ ಬಸ್ ನಿಲ್ದಾಣದಲ್ಲಿರುವ ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ವಿಶ್ವಕರ್ಮ ಜನಾಂಗಕ್ಕೆ ಸೇರಿದ ಬ್ಯಾನರ್ ಕಟ್ಟಲಾಗಿತ್ತು, ರಾಷ್ಟ್ರ ನಾಯಕರಿಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಿದ್ದಾರೆ, ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಪ್ರಬುದ್ಧ ಕರ್ನಾಟಕ ಭೀಮ ಸೇನೆ ತಹಶೀಲ್ದಾರ್ ಕಚೇರಿ, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡಿದೆ.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರಾದ ಯು.ಮುನಿರಾಜು, ನಗರದ ಹಳೇ ಬಸ್ ನಿಲ್ದಾಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗಳಿವೆ, ನಿನ್ನೆ ವಿಶ್ವಕರ್ಮ ಜನಾಂಗದವರು ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಅಡ್ಡವಾಗಿ ಬ್ಯಾನರ್ ಕಟ್ಟಿ ಧೀಮಂತ ನಾಯಕರಿಗೆ ಅವಮಾನ ಮಾಡಿದ್ದಾರೆ. ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಬ್ಯಾನರ್ ಕಟ್ಟಿದ್ದಾರೆ, ರಾಷ್ಟ್ರ ನಾಯಕರಿಗೆ ಅವಮಾನ ಮಾಡಬೇಕೆಂಬ ಉದ್ದೇಶವನ್ನಿಟ್ಟುಕೊಂಡು ಕೃತ್ಯ ಮಾಡಿದ್ದಾರೆ, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳ ಬೇಕು ಇಲ್ಲದಿದ್ದಾರೆ ಹೋರಾಟ ಮಾಡುವುದ್ದಾಗಿ ಹೇಳಿದರು.

ಈ ವೇಳೆ ರಾಜ್ಯ ಗೌರವಾಧ್ಯಕ್ಷರಾದ ವಿ.ನಾಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚೆನ್ನಿಗರಾಯಪ್ಪ, ರಾಜ್ಯ ಕಾರ್ಯದರ್ಶಿ ಮೊಖದ್ದರ್, ತಾಲೂಕು ಅಧ್ಯಕ್ಷ ಜಿ.ಸಿ.ಶಿವಕುಮಾರ್, ತಾಲೂಕು ಕಾರ್ಮಿಕ ಘಟಕ ಅಧ್ಯಕ್ಷ ಜಿ.ಶಿವಕುಮಾರ್, ತಾಲೂಕು ಗೌರವಾಧ್ಯಕ್ಷ ಎಚ್.ಕೃಷ್ಣಪ್ಪ, ಸಂಘಟನಾ ಕಾರ್ಯದರ್ಶಿ ನಯಾಜ್ ಅಹಮದ್, ಅಲ್ಲ ಸಂಖ್ಯಾತರ ಘಟಕದ ಉಪಾಧ್ಯಕ್ಷ ಇರ್ಷಾದ್ ಪಾಷ ಇದ್ದರು.

Leave a Reply

Your email address will not be published. Required fields are marked *

error: Content is protected !!