ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ-ಮಾದಿಗ ಎಂದೇ ಬರಸಬೇಕು- ಮಾಜಿ ಸಚಿವ ಎಚ್.ಆಂಜನೇಯ ಸೂಚನೆ

ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ನಮ್ಮ ಸಮುದಾಯದ ಬಂಧುಗಳು A.K., A.D., A.A ಎಂದು ಬರಸದೆ, ಧರ್ಮದ ಕಾಲಂನಲ್ಲಿ ಹಿಂದು, ಜಾತಿ ಮತ್ತು ಉಪಜಾತಿ ಕಾಲಂನಲ್ಲಿ B-061 ಮಾದಿಗ ಎಂದೇ ಬರಸಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣ ಸಮೀಪವಿರುವ ಡಾ. ರಾಜ್‌ಕುಮಾರ್ ಕಲಾಮಂದಿರ (ಟೌನ್‌ಹಾಲ್)ದಲ್ಲಿ ಕರ್ನಾಟಕ ಮಾದರ ಮಹಾಸಭಾ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬಗ್ಗೆ ಜಾಗೃತಿ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ನಾಲ್ಕು ದಶಕಗಳ ಹೋರಾಟ, ತ್ಯಾಗ, ಬಲಿದಾನಗಳ ಫಲಶೃತಿಯಾಗಿ ಕರ್ನಾಟಕ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಜಾರಿಗೆ ತಂದಿರುವುದು ನಮಗೆಲ್ಲರಿಗೂ ಸಂತೋಷದಾಯಕ ವಿಷಯವಾಗಿದೆ. ಮುಂದುವರೆದು ಒಳ ಮೀಸಲಾತಿ ಪ್ರಯೋಜನವನ್ನು ನಮ್ಮ ಸಮುದಾಯ ಪಡೆದುಕೊಳ್ಳುವ ದಾರಿ ಸುಗಮವಾಗಿಲ್ಲ, ಮೀಸಲಾತಿಗೆ ಅನುಗುಣವಾದ ಶೈಕ್ಷಣಿಕ ಅರ್ಹತೆಗಳುಳ್ಳ ಅಭ್ಯರ್ಥಿಗಳ ಸಂಖ್ಯೆ ಕೇವಲ ಬೆರಳೆಣಿಕೆಯಷ್ಟಿರುವುದು ದುರಾದೃಷ್ಟಕರ ಸಂಗತಿ. ಆದ್ದರಿಂದ ನಮ್ಮ ಸಮುದಾಯದ ಯುವ ಜನರನ್ನು ಕನಿಷ್ಠ ಪದವಿ ವಿದ್ಯಾವಂತರನ್ನಾಗಿ ರೂಪಿಸಬೇಕಾದ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಒಳಮೀಸಲಾತಿಯ ಹೋರಾಟದ ಅನೇಕ ಮಜಲುಗಳಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ದುಡಿದ ಸಮಾಜದ ನಾಯಕರುಗಳು ಈ ಒಳಮೀಸಲಾತಿ ಪಡೆದು ಕೊಳ್ಳುವಲ್ಲಿ ಇರುವಂತಹ ತೊಡಕುಗಳನ್ನು ಪರಿಹರಿಸುವ ಸಲುವಾಗಿ ಎಲ್ಲಾ ರಾಜಕೀಯ ಪಕ್ಷಗಳ ನೇತಾರರು ಪಕ್ಷಾತೀತವಾಗಿ ಒಗ್ಗೂಡಿ ರಾಜ್ಯ ಮಟ್ಟದಲ್ಲಿ ಕರ್ನಾಟಕ ಮಾದಾರ ಮಹಾಸಭಾವನ್ನು ಸ್ಥಾಪಿಸಲಾಗಿದ್ದು, ಸಮುದಾಯವನ್ನು ಸದೃಢವಾಗಿ ಕಟ್ಟಿ ಬೆಳೆಸಲು ಅನೇಕ ಕಾರ್ಯಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮಾಜಿ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ರಾಜ್ಯದಲ್ಲಿ 50ಲಕ್ಷಕ್ಕೂ ಹೆಚ್ಚು ಮಾದಿಗರು ಇದ್ದಾರೆ. ಮಾದಿಗ ಕುರಿತು ಚಿಂತನ ಮಂಥನ‌ವಾಗಬೇಕು. ಮೂಲ ಜಾತಿ ಮಾದಿಗ ಎಂದು ಬರೆಸಿದರೆ ಮಾತ್ರ ಮೀಸಲಾತಿ, ಇಲ್ಲದಿದ್ದಲ್ಲಿ ಯಾವ ಮೀಸಲಾತಿಯೂ ಬರುವುದಿಲ್ಲ ಎಂದು ಎಚ್ಚರಿಸಿದರು…

ಈ ವೇಳೆ ಪಾಲನಹಳ್ಳಿ ಮಠದ ಸಂಸ್ಥಾಪಕರು, ಪೀಠಾಧ್ಯಕ್ಷರಾದ ಡಾ. ಸಿದ್ದರಾಜು ಸ್ವಾಮಿ, ರಾಜ್ಯಸಭಾ ಮಾಜಿ ಸದಸ್ಯರಾದ ಡಾ. ಎಲ್. ಹನುಮಂತಯ್ಯ, ಚಂದ್ರಪ್ಪ, ಪಾವಗಡ ಮಾಜಿ ಶಾಸಕ ತಿಮ್ಮರಾಯಪ್ಪ, ಎಸ್ ಎಸ್ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ವಿ ಮಹೇಶ್ ಕುಮಾರ್, ರಾಮಕೃಷ್ಣಪ್ಪ, ಬಚ್ಚಹಳ್ಳಿ ನಾಗರಾಜ್, ರಾಜಘಟ್ಟ ಕಾಂತರಾಜ್, ತಳವಾರ ನಾಗರಾಜ್, ಹರ್ಷ, ಕುಂಬಾರಪೇಟೆ ನಾರಾಯಣಪ್ಪ, ಮುನಿಯಪ್ಪ. T. D, ವಕೀಲರಾದ ಕಾಂತರಾಜು, ಮುನಿರಾಜು, ಶಿವು, ಮನು, ಮಂಜುನಾಥ್, ವೆಂಕಟೇಶ್, ಹೊಸಕೋಟೆ ಸುಬ್ಬಣ್ಣ, ವಿಜಯಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

1 hour ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

3 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

6 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

7 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

19 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

19 hours ago