ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ನಮ್ಮ ಸಮುದಾಯದ ಬಂಧುಗಳು A.K., A.D., A.A ಎಂದು ಬರಸದೆ, ಧರ್ಮದ ಕಾಲಂನಲ್ಲಿ ಹಿಂದು, ಜಾತಿ ಮತ್ತು ಉಪಜಾತಿ ಕಾಲಂನಲ್ಲಿ B-061 ಮಾದಿಗ ಎಂದೇ ಬರಸಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣ ಸಮೀಪವಿರುವ ಡಾ. ರಾಜ್‌ಕುಮಾರ್ ಕಲಾಮಂದಿರ (ಟೌನ್‌ಹಾಲ್)ದಲ್ಲಿ ಕರ್ನಾಟಕ ಮಾದರ ಮಹಾಸಭಾ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬಗ್ಗೆ ಜಾಗೃತಿ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ನಾಲ್ಕು ದಶಕಗಳ ಹೋರಾಟ, ತ್ಯಾಗ, ಬಲಿದಾನಗಳ ಫಲಶೃತಿಯಾಗಿ ಕರ್ನಾಟಕ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಜಾರಿಗೆ ತಂದಿರುವುದು ನಮಗೆಲ್ಲರಿಗೂ ಸಂತೋಷದಾಯಕ ವಿಷಯವಾಗಿದೆ. ಮುಂದುವರೆದು ಒಳ ಮೀಸಲಾತಿ ಪ್ರಯೋಜನವನ್ನು ನಮ್ಮ ಸಮುದಾಯ ಪಡೆದುಕೊಳ್ಳುವ ದಾರಿ ಸುಗಮವಾಗಿಲ್ಲ, ಮೀಸಲಾತಿಗೆ ಅನುಗುಣವಾದ ಶೈಕ್ಷಣಿಕ ಅರ್ಹತೆಗಳುಳ್ಳ ಅಭ್ಯರ್ಥಿಗಳ ಸಂಖ್ಯೆ ಕೇವಲ ಬೆರಳೆಣಿಕೆಯಷ್ಟಿರುವುದು ದುರಾದೃಷ್ಟಕರ ಸಂಗತಿ. ಆದ್ದರಿಂದ ನಮ್ಮ ಸಮುದಾಯದ ಯುವ ಜನರನ್ನು ಕನಿಷ್ಠ ಪದವಿ ವಿದ್ಯಾವಂತರನ್ನಾಗಿ ರೂಪಿಸಬೇಕಾದ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಒಳಮೀಸಲಾತಿಯ ಹೋರಾಟದ ಅನೇಕ ಮಜಲುಗಳಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ದುಡಿದ ಸಮಾಜದ ನಾಯಕರುಗಳು ಈ ಒಳಮೀಸಲಾತಿ ಪಡೆದು ಕೊಳ್ಳುವಲ್ಲಿ ಇರುವಂತಹ ತೊಡಕುಗಳನ್ನು ಪರಿಹರಿಸುವ ಸಲುವಾಗಿ ಎಲ್ಲಾ ರಾಜಕೀಯ ಪಕ್ಷಗಳ ನೇತಾರರು ಪಕ್ಷಾತೀತವಾಗಿ ಒಗ್ಗೂಡಿ ರಾಜ್ಯ ಮಟ್ಟದಲ್ಲಿ ಕರ್ನಾಟಕ ಮಾದಾರ ಮಹಾಸಭಾವನ್ನು ಸ್ಥಾಪಿಸಲಾಗಿದ್ದು, ಸಮುದಾಯವನ್ನು ಸದೃಢವಾಗಿ ಕಟ್ಟಿ ಬೆಳೆಸಲು ಅನೇಕ ಕಾರ್ಯಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮಾಜಿ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.
ರಾಜ್ಯದಲ್ಲಿ 50ಲಕ್ಷಕ್ಕೂ ಹೆಚ್ಚು ಮಾದಿಗರು ಇದ್ದಾರೆ. ಮಾದಿಗ ಕುರಿತು ಚಿಂತನ ಮಂಥನವಾಗಬೇಕು. ಮೂಲ ಜಾತಿ ಮಾದಿಗ ಎಂದು ಬರೆಸಿದರೆ ಮಾತ್ರ ಮೀಸಲಾತಿ, ಇಲ್ಲದಿದ್ದಲ್ಲಿ ಯಾವ ಮೀಸಲಾತಿಯೂ ಬರುವುದಿಲ್ಲ ಎಂದು ಎಚ್ಚರಿಸಿದರು…
ಈ ವೇಳೆ ಪಾಲನಹಳ್ಳಿ ಮಠದ ಸಂಸ್ಥಾಪಕರು, ಪೀಠಾಧ್ಯಕ್ಷರಾದ ಡಾ. ಸಿದ್ದರಾಜು ಸ್ವಾಮಿ, ರಾಜ್ಯಸಭಾ ಮಾಜಿ ಸದಸ್ಯರಾದ ಡಾ. ಎಲ್. ಹನುಮಂತಯ್ಯ, ಚಂದ್ರಪ್ಪ, ಪಾವಗಡ ಮಾಜಿ ಶಾಸಕ ತಿಮ್ಮರಾಯಪ್ಪ, ಎಸ್ ಎಸ್ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ವಿ ಮಹೇಶ್ ಕುಮಾರ್, ರಾಮಕೃಷ್ಣಪ್ಪ, ಬಚ್ಚಹಳ್ಳಿ ನಾಗರಾಜ್, ರಾಜಘಟ್ಟ ಕಾಂತರಾಜ್, ತಳವಾರ ನಾಗರಾಜ್, ಹರ್ಷ, ಕುಂಬಾರಪೇಟೆ ನಾರಾಯಣಪ್ಪ, ಮುನಿಯಪ್ಪ. T. D, ವಕೀಲರಾದ ಕಾಂತರಾಜು, ಮುನಿರಾಜು, ಶಿವು, ಮನು, ಮಂಜುನಾಥ್, ವೆಂಕಟೇಶ್, ಹೊಸಕೋಟೆ ಸುಬ್ಬಣ್ಣ, ವಿಜಯಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…