ಹೃದಯಾಘಾತದಿಂದ 37 ವರ್ಷದ ಮುರಳಿ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಹೈದರಾಬಾದ್‌ನ ಮೇಡ್ಚಲ್ ಮಲ್ಕಾಜ್‌ಗಿರಿ ಜಿಲ್ಲೆಯ ಕೀಸರ ಪಿಎಸ್ ಮಿತಿಯ ರಾಂಪಳ್ಳಿಯ ಸತ್ಯನಾರಾಯಣ ಕಾಲೋನಿಯಲ್ಲಿ ಮೆಡಿಕಲ್ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಹಠಾತ್ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಕುಸಿದು ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೆಡಿಕಲ್ ಸ್ಟೋರ್‌ನಲ್ಲಿ ಗ್ರಾಹಕರಿಗೆ ಮೆಡಿಸಿನ್ ನೀಡುತ್ತಲೇ ಕುಸಿದುಬಿದ್ದಿದ್ದಾರೆ. ಅಲ್ಲಿನ ಸಿಬ್ಬಂದಿ ಗಾಬರಿಗೊಂಡು ಆಸ್ಪತ್ರೆಗೆ ರವಾನಿಸಿದರೂ ಪ್ರಯೋಜನವಾಗಲಿಲ್ಲ ಎಂದು ತಿಳಿದುಬಂದಿದೆ.