ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ

ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್, ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆ, ಚೈಲ್ಡ್ ರೈಟ್ಸ್ ಟ್ರಸ್ಟ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರೋಜಿಪುರ ಇವರುಗಳ ಸಹಯೋಗದಲ್ಲಿ ಡಿ.4 ರಂದು “ತೆರೆದ ಮನೆ” ಕಾರ್ಯಕ್ರಮವನ್ನು ನಡೆಸಲಾಯಿತು.

ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಚಿದಾನಂದ ಮೂರ್ತಿ ಮಾತನಾಡಿ “ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ಹಾಗೂ ಚೈಲ್ಡ್ ರೈಟ್ಸ್ ಟ್ರಸ್ಟ್ ಇವರುಗಳ ಸಹಯೋಗದಲ್ಲಿ ನಡೆಯುತ್ತಿರುವ “ಎಲ್ಲಾ ಮಕ್ಕಳಿಗೂ, ಎಲ್ಲಾ ಹಕ್ಕುಗಳು (ಹಕ್ಕಿನೊಂದಿಗೆ ಜವಾಬ್ದಾರಿ)” ಅಭಿಯಾನದಡಿ  ಮಕ್ಕಳ ಬದುಕು, ರಕ್ಷಣೆ, ಅಭಿವೃದ್ಧಿ ಹಾಗೂ ಭಾಗವಹಿಸುವಿಕೆಯ ಹಕ್ಕುಗಳನ್ನು ಎಲ್ಲರಿಗೂ ತಲುಪಿಸಲು ಹಾಗೂ ಮಕ್ಕಳಿಗಾಗಿ ಇರುವ ಕಾರ್ಯಕ್ರಮಗಳು ಮತ್ತು ಯೋಜನೆಗಳು ತಲುಪುವಂತೆ ಮಾಡುವುದು ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದಡಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪೊಲೀಸ್ ಠಾಣೆಯನ್ನು ಮಕ್ಕಳ ಸ್ನೇಹಿ ಪೊಲೀಸ್ ಠಾಣೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ನಡೆಯುತ್ತಿರುವ “ತೆರೆದ ಮನೆ” ಕಾರ್ಯಕ್ರಮವನ್ನು ನಮ್ಮ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರೋಜಿಪುರ ಇವರುಗಳೊಂದಿಗೆ ಮಾತನಾಡಿ ಕಾರ್ಯಕ್ರಮವನ್ನು ಎಲ್ಲರ ಸಹಯೋಗದಲ್ಲಿ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

ಮಕ್ಕಳನ್ನು ಬಸ್ ನಲ್ಲಿ ಠಾಣೆಗೆ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿತ್ತು. ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಅಮರೇಶ್ ಗೌಡ ಎ ರವರು ಈ ವ್ಯವಸ್ಥೆಯನ್ನು ಮಕ್ಕಳಿಗಾಗಿ ಮಾಡಿದ್ದರು. ಠಾಣೆಯ ತನಿಖಾ ಸಹಾಯಕರಾದ ಮುನಿರಾಜುರವರು ಮಕ್ಕಳಿಗೆ ಠಾಣೆಯ ಬೇರೆ ಬೇರೆ ವಿಭಾಗಗಳು, ಎಫ್ ಐ ಆರ್ ನೋಂದಣಿ ಪ್ರಕ್ರಿಯೆ, ಮಹಿಳಾ ಸಹಾಯವಾಣಿ, ಉಪಯೋಗಿಸುವ ಶಸ್ತ್ರಗಳು ಇತ್ಯಾದಿ ಮಾಹಿತಿಯನ್ನು ಸಂಪೂರ್ಣವಾಗಿ ಮಕ್ಕಳಿಗೆ ನೀಡಿದರು.

ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳು ಮಕ್ಕಳಿಗೆ ಬಾಲ್ಯ ವಿವಾಹ, ಬಾಲಕಾರ್ಮಿಕತೆ ಹಾಗೂ ಮಾದಕ ವಸ್ತುಗಳ ಬಗ್ಗೆ ಜಾಗೃತಿ ನೀಡಿ ನೇರ ಸಂವಾದ ಹಾಗೂ ಪ್ರಶ್ನೆಗಳನ್ನು ಕೇಳಲು ಅವಕಾಶ ನೀಡಿದರು.

ಕಾರ್ಯಕ್ರಮದಲ್ಲಿ ರೋಜಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 58 ಮಕ್ಕಳು ಹಾಗೂ ಶಿಕ್ಷಕರು, ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆಯ ಎಲ್ಲಾ ಆರಕ್ಷಕರು ಸಿಬ್ಬಂದಿ ವರ್ಗದವರು, ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಸಂಚಾಲಕರಾದ ನವೀನ್ ಹಾಗೂ ಸ್ವಯಂಸೇವಕರಾದ ರತ್ನ, ಕೀರ್ತಿ ಮತ್ತು ಲಾವಣ್ಯ ಇವರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

4 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

5 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

7 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

9 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

11 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

11 hours ago