390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ: 9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು- ಸಚಿವ ಎಂ ಬಿ ಪಾಟೀಲ

ದೇವನಹಳ್ಳಿ: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು.

ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, `ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದ್ದು, 300 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇಲ್ಲಿ ಉತ್ಪಾದಿಸಲಾಗುವ ಬ್ಯಾಟರಿಗಳ ಪೈಕಿ ಶೇಕಡ 20ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು’ ಎಂದಿದ್ದಾರೆ.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದ್ದು, ಫಾಕ್ಸ್-ಕಾನ್ ಸಂಸ್ಥೆಯ ಸಮೀಪದಲ್ಲೇ ಇದು ಅಸ್ತಿತ್ವಕ್ಕೆ ಬರಲಿದೆ. ಮುಂದಿನ ಒಂಬತ್ತು ತಿಂಗಳಲ್ಲಿ ಈ ಘಟಕವು ಕಾರ್ಯಾಚರಣೆ ಆರಂಭಿಸಲಿದ್ದು, ಇಲ್ಲೇ ಬ್ಯಾಟರಿಗಳನ್ನು ತಯಾರಿಸಿ, ಇಲ್ಲಿಂದಲೇ ದೇಶ-ವಿದೇಶಗಳಿಗೂ ಕಳಿಸಿ ಕೊಡಲಿದೆ ಎಂದು ಅವರು ಮಾಹಿತಿ ನೀಡಿದರು.

ಸದ್ಯಕ್ಕೆ ಐಬಿಸಿ ಕಂಪನಿಯು ದಕ್ಷಿಣ ಕೊರಿಯಾದಲ್ಲಿ ಸೆಲ್ಸ್ ಉತ್ಪಾದಿಸಿ, ಅವುಗಳನ್ನು ಇಲ್ಲಿಗೆ ತಂದು ಪೂರ್ಣ ಪ್ರಮಾಣದ ಬ್ಯಾಟರಿಗಳನ್ನು ತಯಾರಿಸುತ್ತಿದೆ. ಈ ಘಟಕ ಕಾರ್ಯಾರಂಭ ಆದ ನಂತರ ಇಲ್ಲೇ ಸೆಲ್ ಗಳ ಉತ್ಪಾದನೆ ಕೂಡ ಆಗಲಿದೆ. ಇದು ದೇಶದಲ್ಲೇ ಮೊದಲ ಸೆಲ್ ಉತ್ಪಾದನಾ ಘಟಕವಾಗಲಿದೆ. ಮುಂಬರುವ ದಿನಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಜತೆಗೆ ಉಳಿದ ವಾಹನಗಳಿಗೂ ಇದು ಬ್ಯಾಟರಿ ಪೂರೈಸಲಿದೆ ಎಂದು ಅವರು ವಿವರಿಸಿದರು.

ಭಾರತದಲ್ಲಿ ಶಿಕ್ಷಣ ಹಾಗೂ ಅಮೆರಿಕದ ಸಿಲಿಕಾನ್ ವ್ಯಾಲಿಯಲ್ಲಿ ತರಬೇತಿ ಪಡೆದ ಯುವ ಉದ್ಯಮಿಗಳು ಐಬಿಸಿ ಕಂಪನಿ ಸ್ಥಾಪಿಸಿ, ಬ್ಯಾಟರಿಗಳ ವಿನ್ಯಾಸ, ಉತ್ಪಾದನೆಗೆ ಆದ್ಯತೆ ಕೊಟ್ಟಿದ್ದಾರೆ. ಹಾಗೆಯೇ ಭಾರತದ ಅಗತ್ಯಕ್ಕೆ ಹೊಂದುವ ಹಾಗೆ ವಿನ್ಯಾಸ ಮಾಡಿರುವುದು ಮೆಚ್ಚುವಂತಹದ್ದು ಎಂದು ಸಚಿವರು ಶ್ಲಾಘಿಸಿದರು

ಇದು ಭಾರತದಲ್ಲಿ ಇಂತಹ ಪ್ರಪ್ರಥಮ ಯೋಜನೆಯಾಗಿದೆ. ಇಲ್ಲಿ ರೆಟ್ರೋಫಿಟ್ ಬ್ಯಾಟರಿಗಳನ್ನು ಕೂಡ ತಯಾರಿಸಲಾಗುವುದು. ಇದರಿಂದ ರಾಜ್ಯದ ಆರ್ಥಿಕತೆಗೆ ಹೊಸ ಬಲ ಬರಲಿದ್ದು, ಚೀನಾದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಎಂದು ಅವರು ವಿವರಿಸಿದ್ದಾರೆ.

ನಾವು ಸುಸ್ಥಿರ, ತಂತ್ರಜ್ಞಾನಾಧಾರಿತ ಮತ್ತು ಎಲ್ಲರನ್ನೂ ಒಳಗೊಳ್ಳುವಂತಹ ಆರ್ಥಿಕತೆಯನ್ನು ಕಟ್ಟುವ ಗುರಿ ಇಟ್ಟುಕೊಂಡಿದ್ದೇವೆ. ಇನ್ನೊಂದೆಡೆಯಲ್ಲಿ, ಹಸಿರು ಇಂಧನ ಬಳಕೆಗೆ ಉತ್ತೇಜನ ಕೊಡುತ್ತಿದ್ದೇವೆ. ಐಬಿಸಿ ಗಿಗಾ ಫ್ಯಾಕ್ಟರಿಯು ಈ ಪರಿವರ್ತನೆಯ ಮೈಲುಗಲ್ಲಾಗಿದೆ. ಇದರಿಂದಾಗಿ ರಾಜ್ಯವು ಇಂಧನ ಕ್ಷೇತ್ರದ ಸಂಶೋಧನೆಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಐಬಿಸಿ ಸಿಇಒ ಪ್ರಿಯದರ್ಶಿ ಪಾಂಡಾ, ಸಿಎಸ್ಒ ಸುಂದರ್ ರಾಮಮೂರ್ತಿ, ಕುನಾಲ್ ಜೈನ್, ಜಾಸ್ ಟೆಕ್ ಅಧ್ಯಕ್ಷ ಜೇಸನ್ ಚುಂಗ್, ಉಪಾಧ್ಯಕ್ಷ ಡ್ಯಾನಿ ಚುಂಗ್, ಮಹಾನಗರ್ ಗ್ಯಾಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಆಶು ಸಿಂಘಾಲ್, ಡೆಪ್ಯುಟಿ ಎಂಡಿ ಸಂಜಯ್ ಶೇಂದೆ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

3 hours ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

10 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

21 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

22 hours ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

22 hours ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

22 hours ago